ಕಾನ್ಪುರ್ (ಉತ್ತರ ಪ್ರದೇಶ): ಕಾನ್ಪುರ್ದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಸ್ಥಳಗಳ ಮೇಲೆ ಪೊಲೀಸರು ದಾಳಿ ನಡೆಸಿ ಆರು ಜನರನ್ನು ಬಂಧಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳು ಸೇರಿದಂತೆ ವಿವಿಧ ಕ್ರಿಕೆಟ್ ಪಂದ್ಯಗಳು ನಡೆಯುತ್ತಿದ್ದ ವೇಳೆ ಬೆಟ್ಟಿಂಗ್ ದಂಧೆ ನಡೆಯುತ್ತಿತ್ತು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಗ್ಯಾಂಗ್ ವಾಟ್ಸಾಪ್ ಮತ್ತು ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ತಮ್ಮ ವ್ಯವಹಾರವನ್ನು ನಡೆಸುತ್ತಿತ್ತು. ಕ್ರಿಕೆಟ್ ಪಂದ್ಯಗಳು ಮುಗಿದ ನಂತರ ಹಣವ ವ್ಯವಹಾರ ಮಾಡುತ್ತಿದ್ದರು. ಸುಮಾರು ಐದು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಡಿಐಜಿ ಪ್ರೀತಿಂದರ್ ಸಿಂಗ್ ಮಾಹಿತಿ ನೀಡಿದರು.
ಬಂಧಿತರಿಂದ ನಗದು ಎಣಿಕೆ ಯಂತ್ರ, 11 ಮೊಬೈಲ್ ಫೋನ್, ಒಂದು ಲ್ಯಾಪ್‌ಟಾಪ್ ಮತ್ತು 93 ಲಕ್ಷ ರೂ. ನಗದು ಹಾಗೂ ಆರೋಪಿಗಳಲ್ಲಿ ಒಬ್ಬರಿಂದ ನೇಪಾಳಿ ಕರೆನ್ಸಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಐಜಿ ಹೇಳಿದರು.