ಕೋಲ್ಕತ್ತಾ: ಮುಂದಿನ ಕೆಲವು ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ಕಾವು ಜೋರಾಗುವ ಮುನ್ನವೇ ಬಂಗಾಳದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.
ಹೌದು, ಬೈಕ್ನಲ್ಲಿ ಬಂದ ಕೆಲವು ಅಪರಿಚಿತ ವ್ಯಕ್ತಿಗಳು ಬಂಗಾಳ ಸಚಿವರ ನಿವಾಸದ ಬಳಿ ಕಚ್ಚಾ ಬಾಂಬ್ ಎಸೆದಿದ್ದಾರೆ. ಕೋಲ್ಕತ್ತಾದ ಕಾಸ್ಬಾ ಪ್ರದೇಶದಲ್ಲಿ ಬುಧವಾರ ರಾತ್ರಿ ಮಾಹಿತಿ ಮತ್ತು ಸಂಸ್ಕೃತಿ ಸಚಿವ ಇಂದ್ರನಿಲ್ ಸೇನ್ ಅವರ ನಿವಾಸದ ಬಳಿ ಈ ದಾಳಿ ನಡೆದಿದ್ದು, ಆದ್ರೆ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿ ನಡೆದಾಗ ಸಚಿವರು ಮನೆಯಲ್ಲಿ ಇರಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಅವರಿಂದ ಮೂರು ಬೈಕ್ಗಳು ಮತ್ತು ಕಚ್ಚಾ ಬಾಂಬ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿಸಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಲಾಗಿದೆ ಮತ್ತು ತನಿಖೆ ಕೈಗೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.