ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮೀಟಿಂಗ್ ನಡೆಯುತ್ತಿದೆ. ಲೋಕಸಭೆ ಚುನಾವಣೆ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಮಹತ್ವದ ಸಭೆ ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಅಹಮದಾಬಾದ್ನಲ್ಲಿ ನಡೆಯುತ್ತಿದೆ.
ಲೋಕಸಭೆ ಚುನಾವಣೆ ಕಾರ್ಯತಂತ್ರ ಕುರಿತಂತೆ ಈ ಸಭೆಯಲ್ಲಿ ಮಹತ್ವದ ಸಮಾಲೋಚನೆ ನಡೆಯುತ್ತಿದ್ದು, ಮೋದಿ ಅವರನ್ನ ಅಧಿಕಾರದಿಂದ ಕೆಳಗಿಳಿಸಲು ಅನುಸರಿಸಬೇಕಾದ ಕಾರ್ಯತಂತ್ರ ಹಾಗೂ ಲೋಕಸಭಾ ಅಭ್ಯರ್ಥಿಗಳ ಪಟ್ಟಿ, ಮೈತ್ರಿ ಕುರಿತಂತೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
ಕಾಂಗ್ರೆಸ್ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ನ ಮುಖ್ಯಸ್ಥೆ ಸೋನಿಯಾ ಗಾಂಧಿ, ಉತ್ತರಪ್ರದೇಶ ಪೂರ್ವದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಸೇರಿದಂತೆ ಪಕ್ಷದ ಎಲ್ಲ ಪ್ರಮುಖ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
: