ನವದೆಹಲಿ: ಕೋವಿಡ್-19 ಪ್ರಕರಣಗಳ ಹೆಚ್ಚಳ, ತೈಲ ಬೆಲೆ ಏರಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಜೂನ್ 23ಕ್ಕೆ ಕಾರ್ಯಕಾರಣಿ ಸಭೆ ಕರೆದಿದೆ. ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.
ಇದೇ ವೇಳೆ ಭಾರತ-ಚೀನಾ ಗಡಿಯಲ್ಲಿ ಉಂಟಾಗಿರುವ ಘರ್ಷಣೆ, ನೇಪಾಳ ಗಡಿ ಸಮಸ್ಯೆ ಕುರಿತು ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ.
ಏಪ್ರಿಲ್ 23 ರಂದು ನಡೆದಿದ್ದ ಸಿಡಬ್ಲ್ಯೂಸಿ ಸಭೆಯಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು. ಇಡೀ ದೇಶ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿದ್ದರೆ ಇದೇ ಬಿಜೆಪಿ ವಿಚಾರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತೆ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿತ್ತು.
ಸದ್ಯ ಕಳೆದ ಎರಡು ದಿನಗಳಿಂದ ಗಡಿಯಲ್ಲಿ ಉಂಟಾಗಿದ್ದ ಉದ್ವಿಗ್ನತೆ ತಹಬದಿಗೆ ಬಂದಿದ್ದು, ಎರಡೂ ದೇಶಗಳ ಸೇನೆಗಳು ಮುಖಾಮುಖಿ ಘರ್ಷಣೆ ನಡೆದಿದ್ದ ಸ್ಥಳದಿಂದ ಹಿಂದೆ ಸರಿದಿವೆ.