ETV Bharat / bharat

'ಬುಲ್​ ಬುಲ್' ಚಂಡಮಾರುತಕ್ಕೆ ಕರಾವಳಿ ತತ್ತರ... ತಕ್ಷಣವೇ ಸ್ಪಂದಿಸಿದ ಪ್ರಧಾನಿ ಮೋದಿ

ಬುಲ್​ ಬುಲ್​ ಚಂಡಮಾರುತ ಗಂಟೆಗೆ 50-70 ಕಿ.ಮೀ. ವೇಗದಲ್ಲಿ ಬೀಸುತ್ತಿದ್ದು, ಭಾರೀ ಪ್ರಮಾಣದ ಮಳೆಯಿಂದಾಗಿ ಪಶ್ಚಿಮ ಬಂಗಾಳದ ಕರಾವಳಿ ತೀರದ ಜಿಲ್ಲೆಗಳಲ್ಲಿ ಆಸ್ತಿ ಮತ್ತು ಬೆಳೆಗಳಿಗೆ ಹಾನಿಯಾಗಿದೆ. ಮರಗಳು ಧರೆಗೆ ಉರುಳಿ ಬಹುತೇಕ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳಲ್ಲಿ ಆಹಾರ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗಿದೆ.

ಬುಲ್ ಬುಲ್ ಚಂಡಮಾರುತ
author img

By

Published : Nov 10, 2019, 11:30 AM IST

ಕೋಲ್ಕತ್ತಾ: ವಾಯುಭಾರ ಕುಸಿತದಿಂದ ಕ್ಯಾರೆ ಚಂಡಮಾರುತ ತನ್ನ ಅಬ್ಬರ ತಗ್ಗಿಸಿದ ಬಳಿಕ ಈಗ ಬುಲ್​ ಬುಲ್ ಆರ್ಭಟ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾದಲ್ಲಿ ತೀವ್ರಗೊಂಡಿದೆ.

ಬುಲ್​​ಬುಲ್​ನಿಂದಾಗಿ ಕೋಲ್ಕತ್ತಾದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ ಸಂಭವಿಸಿದೆ. ಕೋಲ್ಕತ್ತಾ ಕ್ರಿಕೆಟ್​ ಹಾಗೂ ಫುಟ್​ಬಾಲ್​ ಕ್ಲಬ್​​ವೊಂದರಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

  • Reviewed the situation in the wake of cyclone conditions and heavy rain in parts of Eastern India.

    Spoke to WB CM @MamataOfficial regarding the situation arising due to Cyclone Bulbul. Assured all possible assistance from the Centre. I pray for everyone’s safety and well-being.

    — Narendra Modi (@narendramodi) November 10, 2019 " class="align-text-top noRightClick twitterSection" data=" ">

ಚಂಡಮಾರುತ ಗಂಟೆಗೆ 50-70 ಕಿ.ಮೀ. ವೇಗದಲ್ಲಿ ಬೀಸುತ್ತಿದ್ದು, ಭಾರೀ ಪ್ರಮಾಣದ ಮಳೆಯಿಂದಾಗಿ ಪಶ್ಚಿಮ ಬಂಗಾಳದ ಕರಾವಳಿ ತೀರದ ಜಿಲ್ಲೆಗಳಲ್ಲಿ ಆಸ್ತಿ ಮತ್ತು ಬೆಳೆಗಳಿಗೆ ಹಾನಿಯಾಗಿದೆ. ಮರಗಳು ಧರೆಗೆ ಉರುಳಿ ಬಹುತೇಕ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳಲ್ಲಿ ಆಹಾರ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗಿದೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದು, ಪೂರ್ವ ಭಾರತದ ಕೆಲವು ಭಾಗಗಳಲ್ಲಿ ಚಂಡಮಾರುತ ಮತ್ತು ಭಾರಿ ಪ್ರಮಾಣ ಮಳೆ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಬುಲ್​​ಬುಲ್ ಚಂಡಮಾರುತದಿಂದ ಉಂಟಾದ ಪರಿಸ್ಥಿತಿಯ ಬಗ್ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯ ನೀಡಲಾಗುವುದು ಎಂದು ಬರೆದುಕೊಂಡಿದ್ದಾರೆ.

ತೀವ್ರವಾಗಿದ್ದ ಬುಲ್​​ಬುಲ್ ಚಂಡಮಾರುತ ಪ್ರಖರತೆ ದುರ್ಬಲಗೊಂಡಂತಿದೆ. ಬಾಂಗ್ಲಾದೇಶದ ಪೂರ್ವ-ಉತ್ತರ ಕಡೆ ಚಲಿಸುವ ಸಾಧ್ಯತೆಯಿದೆ. ಮುಂದಿನ 6 ಗಂಟೆಗಳಲ್ಲಿ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Intro:Body:Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.