ETV Bharat / bharat

ರೈತರ ಪ್ರತಿಭಟನೆ ವೇಳೆ 1,600 ಮೊಬೈಲ್​ ಟವರ್​ಗಳಿಗೆ ಹಾನಿ: ಪಂಜಾಬ್ ರಾಜ್ಯಪಾಲರ ಕಳವಳ

author img

By

Published : Dec 31, 2020, 10:11 AM IST

ಪಂಜಾಬ್ ರಾಜ್ಯದಲ್ಲಿ ರೈತರ ಪ್ರತಿಭಟನೆ ವೇಳೆ 1,600ಕ್ಕೂ ಹೆಚ್ಚು ಮೊಬೈಲ್ ಟವರ್​ಗಳಿಗೆ ಹಾನಿಯಾಗಿದೆ. ಗವರ್ನರ್​ ವಿ.ಪಿ ಸಿಂಗ್ ಬದ್ನೋರ್ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Punjab Guv to summon CS, DGP
ಪಂಜಾಬ್ ಗವರ್ನರ್

ಚಂಡೀಗಢ: ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ 1,600 ಕ್ಕೂ ಹೆಚ್ಚು ಮೊಬೈಲ್ ಟವರ್‌ಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ರಾಜ್ಯಪಾಲ ವಿ.ಪಿ.ಸಿಂಗ್ ಬದ್ನೋರ್, ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಸಮನ್ಸ್ ನೀಡಲು ನಿರ್ಧರಿಸಿದ್ದಾರೆ.

ಈ ಮಧ್ಯೆ ಅಸೋಸಿಯೇಟೆಡ್ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಆಫ್ ಇಂಡಿಯಾ (ASSOCHAM) ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಪಂಜಾಬ್ ಸಿಎಂಗೆ ಪತ್ರ ಬರೆದಿದೆ.

ನೆರೆಯ ರಾಜ್ಯಗಳನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಗಳಲ್ಲಿ ರೈತರು ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿದ್ದು, ಪ್ರತಿದಿನ ಸಾವಿರಾರು ಕೋಟಿ ರೂ ನಷ್ಟವಾಗುತ್ತದೆ ಎಂದು ಕೈಗಾರಿಕಾ ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದೆ.

ಓದಿ: ರೈತರ ಪ್ರತಿಭಟನೆಗೆ ಬೆಂಬಲ: ರಾಜಸ್ಥಾನ ಸರ್ಕಾರದಿಂದ 'ಕಿಸಾನ್ ಬಚಾವೊ-ದೇಶ್ ಬಚಾವೊ' ಅಭಿಯಾನ

ಇಂತಹ ಕೃತ್ಯಗಳನ್ನು ತಡೆಗಟ್ಟಲು ಮತ್ತು ಸಂವಹನ ಮೂಲಸೌಕರ್ಯಗಳನ್ನು ರಕ್ಷಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರು, ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.

ಈ ವಿಷಯಗಳ ಬಗ್ಗೆ ವರದಿ ಪಡೆಯಲು ಮತ್ತು ಪರಿಣಾಮಗಳ ಬಗ್ಗೆ ತಮ್ಮ ಗಂಭೀರ ಕಳವಳಗಳನ್ನು ವ್ಯಕ್ತಪಡಿಸಲು ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಯನ್ನು ರಾಜಭವನಕ್ಕೆ ಕರೆಸಲು ಅವರು ನಿರ್ಧರಿಸಿದ್ದಾರೆ.

"ಆನ್‌ಲೈನ್ ತರಗತಿಗಳ ಮೂಲಕ ಶಿಕ್ಷಣ ನಡೆಯುತ್ತಿರುವ ಕಷ್ಟದ ಸಮಯ ಇದಾಗಿದೆ. ಇದಕ್ಕಾಗಿ ಸಂವಹನ ಮಾರ್ಗಗಳು ಅತ್ಯಗತ್ಯ. ಸಂವಹನ ಮಾರ್ಗಗಳನ್ನು ಹಾನಿಗೊಳಿಸುವುದು ಮತ್ತು ಅಡ್ಡಿಪಡಿಸುವುದು ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ಇಡೀ ಸಮಾಜ ಮತ್ತು ಆರ್ಥಿಕತೆಯ ಮೇಲೂ ಅನೇಕ ರೀತಿಯಲ್ಲಿ ಪರಿಣಾಮ ಬೀರುತ್ತದೆ" ಎಂದು ರಾಜ್ಯಪಾಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.