ETV Bharat / bharat

ದೆಹಲಿ ಹಿಂಸಾಚಾರ: ಮತ್ತೊಬ್ಬ ಯುವಕ ಸಾವು, ಮೃತರ ಸಂಖ್ಯೆ 48ಕ್ಕೆ ಏರಿಕೆ - ಗುರು ತೇಜ್ ಬಹದ್ದೂರ್ ಆಸ್ಪತ್ರೆ

ಫೆ.24 ರಂದು ಈಶಾನ್ಯ ದೆಹಲಿಯ ಭಜನಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಗಾಯಗೊಂಡು ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾನೆ. ಈ ಮೂಲಕ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 48 ಕ್ಕೇರಿದೆ.

Death toll in Delhi violence climbs to 48
ದೆಹಲಿ ಹಿಂಸಾಚಾರ
author img

By

Published : Mar 3, 2020, 6:42 PM IST

ನವದೆಹಲಿ: ಗಂಭೀರವಾಗಿ ಗಾಯಗೊಂಡು ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ದೆಹಲಿ ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.

ಮೃತ ಯುವಕನನ್ನು ಆಕಿಬ್​ (18) ಎಂದು ಗುರುತಿಸಲಾಗಿದೆ. ಫೆ.24 ರಂದು ಈಶಾನ್ಯ ದೆಹಲಿಯ ಭಜನಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು GTB ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹಿಂಸಾಚಾರ ಪ್ರಕರಣ ಸಂಬಂಧ 369 ಮಂದಿ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ವಶಕ್ಕೆ ಪಡೆದುಕೊಂಡವರ ಹಾಗೂ ಬಂಧಿತರ ಸಂಖ್ಯೆ 1,284 ಎಂದು ದೆಹಲಿ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ದೆಹಲಿ ಹಿಂಸಾಚಾರದ ಕುರಿತು ಸುಳ್ಳು ವದಂತಿಗಳು ಹರಿದಾಡುತ್ತಿದ್ದು, ಇವುಗಳ ಪರಿಶೀಲಿಸಲು ದೆಹಲಿ ಪೊಲೀಸರು ಮಂಗಳವಾರ ರಾಷ್ಟ್ರ ರಾಜಧಾನಿಯ ವಿವಿಧ ಪ್ರದೇಶಗಳ ನಿವಾಸಿಗಳಿಗೆ 16 ಸಹಾಯವಾಣಿ ಸಂಖ್ಯೆಗಳನ್ನು ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.