ಇಡುಕ್ಕಿ: ಕೇರಳದ ಇಡುಕ್ಕಿಯ ರಾಜಮಾಲಾದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಇಡುಕ್ಕಿಯ ಪೆಟ್ಟಿಮುಡಿಯ ರಾಜಮಾಲಾದಲ್ಲಿ ಭೂಕುಸಿತ ಉಂಟಾಗಿತ್ತು. ನಿನ್ನೆಯವರೆಗೂ 26 ಮೃತದೇಹಗಳನ್ನು ಹೊರತೆಗೆಯಲಾಗಿತ್ತು. ಇದೀಗ ಮತ್ತೆ 16 ಮೃತದೇಹಗಳು ಸಿಕ್ಕಿದ್ದು, ಸಾವಿನ ಸಂಖ್ಯೆ 42ಕ್ಕೆ ಏರಿಕೆಯಾಗಿದೆ ಎಂದು ಇಡುಕ್ಕಿ ಜಿಲ್ಲಾಡಳಿತ ತಿಳಿಸಿದೆ. ಮಣ್ಣಿನಡಿ ಇನ್ನೂ ಕೆಲವರು ಸಿಲುಕಿದ್ದು, ಕಾಣೆಯಾದವರಿಗಾಗಿ ಎನ್ಡಿಆರ್ಎಫ್, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅಗ್ನಿಶಾಮಕ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.