ತಿರುಮಲ(ಆಂಧ್ರ ಪ್ರದೇಶ): ದೂರದ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಬಾಲಿವುಡ್ನ ಹಾಟ್ ಜೋಡಿ ದೀಪಿಕಾ ಪಡುಕೋಣೆ-ರಣವೀರ್ ಸಿಂಗ್ ಇದೀಗ ಮೊದಲ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ಸಪ್ತಪದಿ ತುಳಿದು ಇಂದಿಗೆ ಒಂದು ವರ್ಷ ತುಂಬಿರುವ ಕಾರಣ ವಿವಾಹ ವಾರ್ಷಿಕೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ಈ ದಂಪತಿ ಮುಂದಾಗಿದ್ದಾರೆ.

2018ರ ನ. 14 ರಂದು ಅದ್ಧೂರಿಯಾಗಿ ಮದುವೆಯಾದ ಈ ಜೋಡಿ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ವಿಭಿನ್ನವಾಗಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದೆ. ಇಂದು ಆಂಧ್ರ ಪ್ರದೇಶದ ತಿರುಮಲದ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.

ಸಾಂಪ್ರದಾಯಿಕ ಉಡುಗೆ ತೊಟ್ಟ ಈ ಜೋಡಿ ಎಲ್ಲರ ಗಮನ ಸೆಳೆದಿದ್ದಾರೆ.
