ದೆಹಲಿ: ಜೆಎನ್‌ಯು ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಇದೀಗ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕ್ಯಾಂಪಸ್‌ಗೆ ಆಗಮಿಸಿದ್ದು ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.
-
#WATCH Delhi: Deepika Padukone outside Jawaharlal Nehru University, to support students protesting against #JNUViolence. pic.twitter.com/vS5RNajf1O
— ANI (@ANI) January 7, 2020 " class="align-text-top noRightClick twitterSection" data="
">#WATCH Delhi: Deepika Padukone outside Jawaharlal Nehru University, to support students protesting against #JNUViolence. pic.twitter.com/vS5RNajf1O
— ANI (@ANI) January 7, 2020#WATCH Delhi: Deepika Padukone outside Jawaharlal Nehru University, to support students protesting against #JNUViolence. pic.twitter.com/vS5RNajf1O
— ANI (@ANI) January 7, 2020
ಕೆಲ ದಿನಗಳ ಹಿಂದಷ್ಟೇ ಮಾಸ್ಕ್ ಧರಿಸಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ನುಗ್ಗಿದ ದುಷ್ಕರ್ಮಿಗಳು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆ ನಂತರ ಮತ್ತೆ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಇದೀಗ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ವಿದ್ಯಾರ್ಥಿಗಳ ಬೆನ್ನಿಗೆ ನಿಂತಿದ್ದಾರೆ. ಜನವರಿ 10 ರಂದು ದೀಪಿಕಾ ಅಭಿನಯದ ಬಹುನಿರೀಕ್ಷಿತ 'ಚಪಾಕ್' ಸಿನಿಮಾ ಬಿಡುಗಡೆಯಾಗಲಿದ್ದು, ಚಿತ್ರದ ಪ್ರಮೋಷನ್ ಕೆಲಸಗಳನ್ನು ಬದಿಗೊತ್ತಿ ದೀಪಿಕಾ ಜೆಎನ್‌ಯು ಕ್ಯಾಂಪಸ್‌ಗೆ ಧಾವಿಸಿದ್ದಾರೆ. ವಿದ್ಯಾರ್ಥಿಗಳ ನಡುವೆ ನಿಂತು ಅವರಿಗೆ ಬೆಂಬಲ ನೀಡಿದ್ದಾರೆ. ಸುಮಾರು 10 ನಿಮಿಷಗಳು ವಿದ್ಯಾರ್ಥಿಗಳ ನಡುವೆ ನಿಂತು ನಂತರ ಏನೂ ಮಾತನಾಡದೆ ಅಲ್ಲಿಂದ ಹೊರಟಿದ್ದಾರೆ. ಹಲ್ಲೆ ನಂತರ ಸುಮಾರು 30 ವಿದ್ಯಾರ್ಥಿಗಳನ್ನು ಏಮ್ಸ್ಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ಹಿಂಸಾಚಾರದ ನಂತರ ಸಾಕಷ್ಟು ಬಾಲಿವುಡ್ ಸೆಲಬ್ರಿಟಿಗಳು ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿದ್ದರು.
-
RT if you will Boycott Movies of @deepikapadukone for her Support to #TukdeTukdeGang and Afzal Gang pic.twitter.com/LN5rpwjDmT
— Tajinder Pal Singh Bagga (@TajinderBagga) January 7, 2020 " class="align-text-top noRightClick twitterSection" data="
">RT if you will Boycott Movies of @deepikapadukone for her Support to #TukdeTukdeGang and Afzal Gang pic.twitter.com/LN5rpwjDmT
— Tajinder Pal Singh Bagga (@TajinderBagga) January 7, 2020RT if you will Boycott Movies of @deepikapadukone for her Support to #TukdeTukdeGang and Afzal Gang pic.twitter.com/LN5rpwjDmT
— Tajinder Pal Singh Bagga (@TajinderBagga) January 7, 2020
ಇನ್ನು ದೀಪಿಕಾ ಜೆಎನ್‌ಯು ಕ್ಯಾಂಪಸ್‌ಗೆ ಹೋಗಿದ್ದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರು ಆಕ್ರೋಶಗೊಂಡಿದ್ದಾರೆ. 'ದೀಪಿಕಾ ಸಿನಿಮಾಗಳನ್ನು ಬ್ಯಾನ್ ಮಾಡುವಂತೆ ಬಿಜೆಪಿ ನಾಯಕ ತೇಜಿಂದರ್ ಸಿಂಗ್ ಪಾಲ್ ಬಗ್ಗಾ ತಮ್ಮ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.