ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಬಾಲಿವುಡ್ ಸೆಲಬ್ರಿಟಿಗಳು ಹಾಗೂ ಡ್ರಗ್ ಪೆಡ್ಲರ್ಗಳ ನಡುವಿನ ಸಂಬಂಧದ ಬಗ್ಗೆ ಎನ್ಸಿಬಿ ತನಿಖೆ ನಡೆಸುತ್ತಿದೆ. ಈ ಸಂಬಂಧ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್ ಕರೀಷ್ಮಾ ಪ್ರಕಾಶ್‌ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಕರೀಷ್ಮಾ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ನಿನ್ನೆಯಷ್ಟೇ ಕರೀಷ್ಮಾ ಪ್ರಕಾಶ್ ಅವರ ವರ್ಸೋವಾ ನಿವಾಸದ ಮೇಲೆ ಎನ್ಸಿಬಿ ದಾಳಿ ನಡೆಸಿ 1.8 ಗ್ರಾಂ ಹಶೀಶ್ (ಮಾದಕವಸ್ತುವಿನ ಒಂದು ಬಗೆ) ಅನ್ನು ವಶಪಡಿಸಿಕೊಂಡಿತ್ತು. ಬಳಿಕ ಹೆಚ್ಚಿನ ತನಿಖೆಗಾಗಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
ಕಳೆದ ತಿಂಗಳು ಡ್ರಗ್ ನಂಟಿರುವ ವಿಚಾರವಾಗಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಮತ್ತು ರಕುಲ್ ಪ್ರೀತ್ ಸಿಂಗ್ ಸೇರಿ ಹಲವರನ್ನು ಎನ್ಸಿಬಿ ವಿಚಾರಣೆ ನಡೆಸಿತ್ತು.
ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಡ್ರಗ್ ಲಿಂಕ್ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಭಾಗವಾಗಿ ಎನ್ಸಿಬಿ ಈವರೆಗೆ 23 ಜನರನ್ನು ಬಂಧಿಸಿದೆ.