ETV Bharat / bharat

ರಾಷ್ಟ್ರ ರಾಜಧಾನಿಯ ಪರಿಸ್ಥಿತಿ ಚಿಂತಾಜನಕ: ಕೇಂದ್ರದ ಅಧಿಕಾರಿಗಳಿಂದ ಸಭೆ - ದಿನದಿಂದ ದಿನಕ್ಕ ಕುಸಿಯುತ್ತಿದೆ

ನವದೆಹಲಿಯ ವಾಯು ಗುಣಮಟ್ಟ ದಿನದಿಂದ ದಿನಕ್ಕೆ ಅಪಾಯದ ಹಂತದತ್ತ ಕುಸಿಯುತ್ತಿದ್ದು, ಈ ಬಗ್ಗೆ ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ದಾರೆ.

ರಾಷ್ಟ್ರ ರಾಜಧಾನಿಯ ಪರಿಸ್ಥಿತಿ ಚಿಂತಾಜನಕ
author img

By

Published : Nov 3, 2019, 10:22 PM IST

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟದ ಸೂಚ್ಯಂಕ 600ರ ಗಡಿ ದಾಟಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರವು ಪಂಜಾಬ್, ಹರಿಯಾಣ ಮತ್ತು ದೆಹಲಿಯ ಹಿರಿಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದೆ.

  • Principal Secretary to Prime Minister held high level meeting today through video conferencing with Punjab, Haryana & Delhi, to tackle air pollution. Cabinet Secretary to monitor situation on daily basis. State Chief Secretaries have been asked to monitor their districts on 24x7. pic.twitter.com/2Ys2D0oKj4

    — ANI (@ANI) November 3, 2019 " class="align-text-top noRightClick twitterSection" data=" ">

ಪ್ರಧಾನಿ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪಿ.ಕೆ.ಮಿಶ್ರಾ ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ಪಂಜಾಬ್, ಹರಿಯಾಣ ಮತ್ತು ದೆಹಲಿಯ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ, ವಾಯುಮಾಲಿನ್ಯವನ್ನು ಕಡಿಮೆ ಮಾಡಲು ದೆಹಲಿಯಲ್ಲಿ ಸುಮಾರು 300 ತಂಡಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಪ್ರಧಾನ ಕಾರ್ಯದರ್ಶಿಗೆ ಮಾಹಿತಿ ನೀಡಲಾಗಿದೆ. ಅಲ್ಲದೆ ಈ ಕಾರ್ಯಕ್ಕೆ ಅಗತ್ಯವಾದ ಯಂತ್ರೋಪಕರಣಗಳನ್ನು ಎಲ್ಲ ರಾಜ್ಯಗಳಲ್ಲಿ ವಿತರಿಸಲಾಗಿದೆ ಎಂದು ಹೇಳಲಾಗಿದೆ.

ಚರ್ಚೆ ವೇಳೆ ಆಯಾ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ವಿವಿಧ ಜಿಲ್ಲೆಗಳ ಪರಿಸ್ಥಿತಿಯನ್ನು ದಿನದ 24 ಗಂಟೆಯೂ ಮೇಲ್ವಿಚಾರಣೆ ನಡೆಸಲು ತಿಳಿಸಲಾಗಿದೆ.

ಭಾನುವಾರದ ಒಟ್ಟಾರೆ ವಾಯು ಗುಣಮಟ್ಟದ ಸೂಚ್ಯಂಕವು 625 ಕ್ಕೆ ಏರಿಕೆಯಾಗಿದೆ. ಜಹಾಂಗೀರ್‌ಪುರಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ(Air Quality Index) 1690ಕ್ಕೆ ತಲುಪಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ 1120, ಗುರುಗ್ರಾಮ್ 990 ಮತ್ತು ನೋಯ್ಡಾದಲ್ಲಿ ವಾಯು ಗುಣಮಟ್ಟದ ಸೂಚ್ಯಂಕವು 974ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.