ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಸ್ವಲ್ಪ ಮಟ್ಟಿನ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.
ಭಾನುವಾರ ಮಧ್ಯಾಹ್ನದಿಂದ ಜ್ವರ ಹಾಗೂ ನೆಗಡಿಯಿಂದ ಕೇಜ್ರಿವಾಲ್ ಬಳಲುತ್ತಿದ್ದು, ಎಲ್ಲಾ ಸಭೆ, ಸಮಾರಂಭಗಳನ್ನು ರದ್ದು ಮಾಡಿದ್ದಾರೆ. ಜೊತೆಗೆ ರಾಜಕೀಯ ವ್ಯಕ್ತಿಗಳ, ಅಧಿಕಾರಿಗಳ ಭೇಟಿಯನ್ನು ಮುಂದೂಡಿದ್ದಾರೆ.
ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ ಕೇಜ್ರಿವಾಲ್ಗೆ ಕೊರೊನಾ ಸೋಂಕಿನ ಪರೀಕ್ಷೆ ನಡೆಯಲಿದ್ದು, ಸದ್ಯಕ್ಕೆ ಅವರು ತಮ್ಮ ಮನೆಯಲ್ಲಿಯೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.