ನವದೆಹಲಿ: 2012ರ ದೆಹಲಿಯಲ್ಲಿ ಅತ್ಯಂತ ಅಮಾನವೀಯ ರೀತಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೊಳಗಾದ ನಾಲ್ವರು ಅಪರಾಧಿಗಳ ವಿರುದ್ಧ ದೆಹಲಿ ನ್ಯಾಯಾಲಯ ಡೆತ್ ವಾರಂಟ್ ಜಾರಿಗೊಳಿಸಿದೆ.
ಜನವರಿ 22ರಂದು ಬೆಳಿಗ್ಗೆ 7 ಗಂಟೆಗೆ ಅತ್ಯಾಚಾರಿಗಳನ್ನು ಗಲ್ಲಿಗೆ ಹಾಕುವಂತೆ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಈ ಆದೇಶ ಹೊರ ಬೀಳುತ್ತಿದ್ದಂತೆ ಸಂತ್ರಸ್ತೆಯ ಪೋಷಕರೂ ಸೇರಿದಂತೆ ದೇಶಾದ್ಯಂತ ತೀರ್ಪಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
-
2012 Delhi gangrape case: A Delhi court issues death warrant against all 4 convicts, execution to be held on 22nd January at 7 am https://t.co/K4JCAM0RJa
— ANI (@ANI) January 7, 2020 " class="align-text-top noRightClick twitterSection" data="
">2012 Delhi gangrape case: A Delhi court issues death warrant against all 4 convicts, execution to be held on 22nd January at 7 am https://t.co/K4JCAM0RJa
— ANI (@ANI) January 7, 20202012 Delhi gangrape case: A Delhi court issues death warrant against all 4 convicts, execution to be held on 22nd January at 7 am https://t.co/K4JCAM0RJa
— ANI (@ANI) January 7, 2020
ಅಪರಾಧಿಗಳಾದ ಪವನ್ ಕುಮಾರ್ ಗುಪ್ತಾ, ಅಕ್ಷಯ್, ವಿನಯ್, ಮತ್ತು ಮುಖೇಶ್ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಪ್ರಕರಣದ ಅಪರಾಧಿಗಳ ವಿರುದ್ಧ ಡೆತ್ ವಾರೆಂಟ್ ಹೊರಡಿಸಬೇಕು ಎಂದು ನಿರ್ಭಯಾ ಪೋಷಕರು ಮನವಿ ಸಲ್ಲಿಸಿದ್ದರು. ಇವತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸತೀಶ್ಕುಮಾರ್ ಅರೋರಾ ಅವರು ಆದೇಶ ಪ್ರಕಟಿಸಿದರು.
ಮರಣ ದಂಡನೆಗೆ ಈ ಮೊದಲೇ ಸಿದ್ದತೆ ನಡೆದಿತ್ತು?
ನಿರ್ಭಯಾ ಅತ್ಯಾಚಾರಿಗಳಿಗೆ ಶೀಘ್ರದಲ್ಲೇ ಗಲ್ಲುಶಿಕ್ಷೆ ವಿಧಿಸುವ ಸುದ್ದಿ ಈ ಮೊದಲೇ ಹರಿದಾಡುತ್ತಿತ್ತು. ಆದರೆ, ಈ ಬಗ್ಗೆ ಇನ್ನೂ ಅಧಿಕೃತವಾಗಿ ದಿನಾಂಕ ಪ್ರಕಟವಾಗಿರಲಿಲ್ಲ. ಈ ಎಲ್ಲದರ ನಡುವೆಯೇ ಗಲ್ಲಿಗೇರಿಸಲು ಇಬ್ಬರು ಸಿಬ್ಬಂದಿಯನ್ನು ಒದಗಿಸಬೇಕೆಂದು ಎಂದು ಉತ್ತರ ಪ್ರದೇಶ ಪೊಲೀಸರಿಗೆ ತಿಹಾರ್ ಜೈಲಿನಿಂದ ಮನವಿ ಹೋಗಿತ್ತು.
ಗಲ್ಲಿಗೇರಿಸಲು ತಿಹಾರ್ ಜೈಲಿನಲ್ಲಿ ನೂತನವಾದ ಗಲ್ಲುಕಂಬ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸುವ ಸಲುವಾಗಿ ಈ ಗಲ್ಲುಕಂಬ ಸಿದ್ಧಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ನಾಲ್ವರನ್ನು ಒಮ್ಮೆಗೆ ಗಲ್ಲಿಗೇರಿಸಿದರೆ, ಈ ಮೂಲಕ ಆರೋಪಿಗಳನ್ನು ಏಕಕಾಲದಲ್ಲೇ ಗಲ್ಲಿಗೇರಿಸುವ ದೇಶದ ಮೊದಲ ಕಾರಾಗೃಹ ತಿಹಾರ್ ಜೈಲಾಗಲಿದೆ ಎಂಬ ಖ್ಯಾತಿ ಪಡೆಯಲಿದೆ ಎನ್ನಲಾಗುತ್ತಿದೆ.
'ಕೋರ್ಟ್‌ಆ ದೇಶ ನನಗೆ ತುಂಬಾ ಸಂತೋಷ ತಂದಿದೆ'
ದೆಹಲಿ ನ್ಯಾಯಾಲಯದ ತೀರ್ಪು ನನಗೆ ಅತೀವ ಸಂತಸ ತಂದಿದೆ. ಈ ನಿರ್ಧಾರದಿಂದ ಮುಂದೆ ಅತ್ಯಾಚಾರದಂತಹ ಅಪರಾಧ ಮಾಡುವವರಿಗೆ ಭಯ ಉಂಟು ಮಾಡಿದೆ ಎಂದು ನಿರ್ಭಯಾ ಅತ್ಯಾಚಾರ ಸಂತ್ರಸ್ತೆಯ ತಂದೆ ಬದ್ರಿನಾಥ್ ಸಿಂಗ್ ಹರ್ಷ ವ್ಯಕ್ತಪಡಿಸಿದ್ದಾರೆ.
-
Badrinath Singh, father of 2012 Delhi gang-rape victim: I am happy with the court's decision. The convicts will be hanged at 7 am on 22nd January; This decision will instill fear in people who commit such crimes. pic.twitter.com/CURPOXCUFD
— ANI (@ANI) January 7, 2020 " class="align-text-top noRightClick twitterSection" data="
">Badrinath Singh, father of 2012 Delhi gang-rape victim: I am happy with the court's decision. The convicts will be hanged at 7 am on 22nd January; This decision will instill fear in people who commit such crimes. pic.twitter.com/CURPOXCUFD
— ANI (@ANI) January 7, 2020Badrinath Singh, father of 2012 Delhi gang-rape victim: I am happy with the court's decision. The convicts will be hanged at 7 am on 22nd January; This decision will instill fear in people who commit such crimes. pic.twitter.com/CURPOXCUFD
— ANI (@ANI) January 7, 2020
'ನನ್ನ ಮಗಳು ಜಯಸಿದ್ದಾಳೆ'
ನನ್ನ ಮಗಳಿಗೆ ನ್ಯಾಯ ಸಿಕ್ಕಿದೆ. ಈ ತೀರ್ಪು ನ್ಯಾಯಾಂಗ ವ್ಯವಸ್ಥೆಯಲ್ಲಿ ಜನರ ನಂಬಿಕೆ ಬಲಪಡಿಸಿದಂತಾಗಿದೆ ಎಂದು ಸಂತ್ರಸ್ತೆಯ ತಾಯಿ ಆಶಾ ದೇವಿ ಸಂತಸ ವ್ಯಕ್ತಪಡಿಸಿದ್ದಾರೆ.
-
Asha Devi, mother of 2012 Delhi gang-rape victim: My daughter has got justice. Execution of the 4 convicts will empower the women of the country. This decision will strengthen the trust of people in the judicial system. pic.twitter.com/oz1V5ql8Im
— ANI (@ANI) January 7, 2020 " class="align-text-top noRightClick twitterSection" data="
">Asha Devi, mother of 2012 Delhi gang-rape victim: My daughter has got justice. Execution of the 4 convicts will empower the women of the country. This decision will strengthen the trust of people in the judicial system. pic.twitter.com/oz1V5ql8Im
— ANI (@ANI) January 7, 2020Asha Devi, mother of 2012 Delhi gang-rape victim: My daughter has got justice. Execution of the 4 convicts will empower the women of the country. This decision will strengthen the trust of people in the judicial system. pic.twitter.com/oz1V5ql8Im
— ANI (@ANI) January 7, 2020
'ಅಪರಾಧಿಗಳನ್ನು ಕೂಡಲೇ ಗಲ್ಲಿಗೇರಿಸಿ'
ಗಲ್ಲು ಪ್ರಕಟವಾದರೂ ಕೊನೆಗಾಗುವುದೇ ಬೇರೆ ಎಂಬ ಚರ್ಚೆಗಳೂ ನಡೆಯುತ್ತಿವೆ. ಹೌದು, ಮೊದಲು ನ್ಯಾಯಾಲಯದಿಂದ ತೀರ್ಪು ಹೊರ ಬೀಳುತ್ತೆ. ಆದರೆ, ಅಪರಾಧಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತಾರೆ. ರಾಷ್ಟ್ರಪತಿಗಳ ಮನೆ ಬಾಗಿಲಿಗೆ ಹೋಗುತ್ತಾರೆ. ಆ ಬಳಿಕ ಕಾನೂನುಗಳನ್ನು ದುರ್ಬಳಕೆ ಮಾಡಿಕೊಂಡು ಗಲ್ಲಿನಿಂದ ಹೊರಬರುತ್ತಾರೆ ಎಂಬೆಲ್ಲಾ ಚರ್ಚೆಗಳೂ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ. ಆದ್ದರಿಂದ ಕೂಡಲೇ ದುಷ್ಟರನ್ನು ಗಲ್ಲಿಗೇರಿಸಬೇಕು. ತಪ್ಪಿಸಿಕೊಳ್ಳಲು ಸಮಯಾವಕಾಶ ನೀಡಬಾರದು. ಅದು ಹೀಗೆ ಮುಂದುವರಿದರೆ ಜನ ಭಯಪಡುವುದಿಲ್ಲ ಎಂದೆಲ್ಲಾ ನೆಟ್ಟಿಗರು ಕಿಡಿ ಕಾರಿದ್ದರು.
ದೇಶದ ಅಂತ:ಸತ್ವವನ್ನೇ ಕೆಣಕಿದ ಪ್ರಕರಣ:
2012ರ ಡಿಸೆಂಬರ್ 16ರಂದು ದೆಹಲಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ನಿರ್ಭಯಾ (ಹೆಸರು ಬದಲಿಸಲಾಗಿದೆ) ಅವರನ್ನು ಸಾಮೂಹಿಕ ಅತ್ಯಾಚಾರ ಮಾಡಿ ಅಮಾನುಷವಾಗಿ ಕೊಲೆ ಮಾಡಲಾಗಿತ್ತು. ಬಸ್ಸಿನೊಳಗೆ ಆರು ಜನರು ಸೇರಿಕೊಂಡು ಅವರ ಮೇಲೆ ಅತ್ಯಾಚಾರ ನಡೆಸಿದ್ದರು. ದೈಹಿಕವಾಗಿಯೂ ಹಲ್ಲೆ ನಡೆಸಲಾಗಿತ್ತು. ಆರೋಪಿಗಳು ಸಂತ್ರಸ್ತೆ ಜೊತೆಗಿದ್ದ ಸ್ನೇಹಿತರ ಕೈ ಕಾಲು ಕಟ್ಟಿ ಪ್ರಜ್ಞೆ ತಪ್ಪುವಂತೆ ಥಳಿಸಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ಜೀವನ್ಮರಣ ಹೋರಾಟ ನಡೆಸಿ ಮೃತಪಟ್ಟರು. ಆ ಘಟನೆಗೆ ಆಕೆಯ ಜೊತೆಗಿದ್ದ ಸ್ನೇಹಿತರನ್ನು ಬಿಟ್ಟರೆ ಮತ್ಯಾರು ಸಾಕ್ಷಿಗಿರಲಿಲ್ಲ. ರಾಮ್ ಸಿಂಗ್, ಅಕ್ಷಯ್, ವಿನಯ್, ಮುಕೇಶ್, ಪವನ್ ಕುಮಾರ್ ಹಾಗೂ ಮತ್ತೋರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದರು.
ಪ್ರಕರಣದ ಪ್ರಮುಖ ಆರೋಪಿ ರಾಮ್ ಸಿಂಗ್ ತಿಹಾರ್ ಜೈಲಿನಲ್ಲೇ ನೇಣಿಗೆ ಶರಣಾಗಿದ್ದ. ಬಾಲಾಪರಾಧ ನ್ಯಾಯಾಲಯದಲ್ಲಿ ಅಪ್ರಾಪ್ತ ಆರೋಪಿಯನ್ನು ವಿಚಾರಣೆ ನಡೆಸಲಾಯಿತು. ಮಾಡಿರುವ ತಪ್ಪು ರುಜುವಾತಾದ ಬಳಿಕ ಉಳಿದ ನಾಲ್ವರು ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಯಿತು.