ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ದೆಹಲಿಯ ಆಕಾಶವಾಣಿ ಭವನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಎಂಟು ವಾಹನಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಭವನದ ಕೋಣೆಯ ಸಂಖ್ಯೆ 101ರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಯಲ್ಲಿ ಯಾವುದೇ ಹಾನಿಯುಂಟಾಗಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆಯ (ಡಿಎಫ್‌ಎಸ್) ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರವಾಸಕ್ಕೆ ಬಂದಿದ್ದ ಯುವತಿ ಆನೆ ದಾಳಿಗೆ ಬಲಿ
ಕೆಲವು ವಿದ್ಯುತ್ ಉಪಕರಣಗಳಿಂದ ಈ ಅವಘಡ ಸಂಭವಿಸಿದೆ ಎಂದು ಅತುಲ್ ಗರ್ಗ್ ಹೇಳಿದ್ದಾರೆ.