ನವದೆಹಲಿ : ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಇತ್ತೀಚಿನ ಮಾರ್ಗಸೂಚಿಗಳಿಗೆ ಅನುಸಾರವಾಗಿ ರಾಜ್ಯ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಸಿದ್ಧತೆ ನಡೆಸಿದೆ.
ನಗರದಲ್ಲಿ ಮದ್ಯ ಮಾರಾಟ ಮಾಡುವ ಜವಾಬ್ದಾರಿಯನ್ನು ಹೊಂದಿರುವ ನಾಲ್ಕು ಸರ್ಕಾರಿ ಸಂಸ್ಥೆಗಳಿಗೆ ಅಬಕಾರಿ ಇಲಾಖೆ ನಿರ್ದೇಶನ ನೀಡಿದ್ದು, ಗೃಹ ಸಚಿವಾಲಯ ನಿಗದಿಪಡಿಸಿದ ಎಲ್ಲಾ ಷರತ್ತುಗಳನ್ನು ಪೂರೈಸುವ ಮಳಿಗೆಗಳನ್ನು ಗುರುತಿಸುವಂತೆ ಹೇಳಿದೆ. ಕೋವಿಡ್ ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನಿರಾಕರಿಸಲಾಗಿದೆ.
ಸಾರ್ವಜನಿಕ ಸ್ಥಳಗಳು ಮತ್ತು ಮಾಲ್ಗಳನ್ನು ಹೊರತುಪಡಿಸಿ, ದೆಹಲಿ ಪ್ರವಾಸೋದ್ಯಮ ಮತ್ತು ಸಾರಿಗೆ ಅಭಿವೃದ್ಧಿ ನಿಗಮ, ದೆಹಲಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ, ದೆಹಲಿ ರಾಜ್ಯ ನಾಗರಿಕ ಸರಬರಾಜು ನಿಗಮ ಮತ್ತು ದೆಹಲಿ ಗ್ರಾಹಕರ ಸಹಕಾರಿ ಸಗಟು ಅಂಗಡಿಗಳಿಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಮಾಲ್‌ಗಳಲ್ಲಿ ಹೊರತುಪಡಿಸಿ ಸುಮಾರು 450 ಮದ್ಯದಂಗಡಿಗಳಿವೆ.