ನವದೆಹಲಿ: 2017 ರ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿರುವ ಬಿಜೆಪಿ ಉಚ್ಛಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಸಲ್ಲಿಸಿರುವ ಮೇಲ್ಮನವಿಗೆ ಪ್ರತಿಕ್ರಿಯೆ ನೀಡುವಂತೆ ದೆಹಲಿ ಹೈಕೋರ್ಟ್ ಸಿಬಿಐಯನ್ನ ಕೋರಿದೆ.
ನ್ಯಾಯಮೂರ್ತಿಗಳಾದ ಮನಮೋಹನ್ ಮತ್ತು ಸಂಗೀತ ಧಿಂಗ್ರಾ ಸೆಹಗಲ್ ಅವರ ನ್ಯಾಯಪೀಠವು ಸೆಂಗಾರ್‌ಗೆ 60 ದಿನಗಳಲ್ಲಿ 25 ಲಕ್ಷ ರೂ. ದಂಡವನ್ನು ಜಮಾ ಮಾಡಲು ಅವಕಾಶ ನೀಡಿದೆ. ಅದರಲ್ಲಿ 10 ಲಕ್ಷ ರೂಪಾಯಿಗಳನ್ನ ಯಾವುದೇ ಷರತ್ತು ಇಲ್ಲದೆ ಅತ್ಯಾಚಾರದಿಂದ ಬದುಕುಳಿದವರಿಗೆ ಬಿಡುಗಡೆ ಮಾಡಲಾಗುವುದು. ಸದ್ಯ ನ್ಯಾಯಾಲಯ ಈ ವಿಷಯವನ್ನ ಮೇ 4 ಕ್ಕೆ ಮುಂದೂಡಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಚಾರಣಾ ನ್ಯಾಯಾಲಯವು ಆದೇಶ ಹೊರಡಿಸಿತ್ತು. ನ್ಯಾಯಾಲಯ ತೀರ್ಪನ್ನು ಪ್ರಶ್ನಿಸಿ ಸೆಂಗಾರ್ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆ ಸೆಕ್ಷನ್ 5 (ಸಿ) ಮತ್ತು 6ರ ಅಡಿಯಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಳೆದ ವರ್ಷ ಡಿಸೆಂಬರ್ 16ರಂದು ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಸೆಂಗಾರ್ನನ್ನು ಅಪರಾಧಿ ಎಂದು ಪರಿಗಣಿಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿತ್ತು.
ಉತ್ತರ ಪ್ರದೇಶದ ಬಂಗಾರ್ಮೌ ಕ್ಷೇತ್ರದಲ್ಲಿ 4 ಬಾರಿ ಬಿಜೆಪಿ ಶಾಸಕನಾಗಿದ್ದ ಸೆಂಗಾರ್, 2017ರ ಜೂನ್‌ನಲ್ಲಿ ಉನ್ನಾವೊದ ತಮ್ಮ ನಿವಾಸದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ನಂತರ ಆತನನ್ನು ಬಂಧಿಸಲಾಯಿತು. ಪ್ರಸ್ತುತ ಅಪರಾಧಿಯನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.