ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಆಸ್ಪತ್ರೆಗಳು ದೆಹಲಿ ಜನರಿಗೆ ಚಿಕಿತ್ಸೆ ನೀಡಲು ಮಾತ್ರ ಸೀಮಿತ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ಆಸ್ಪತ್ರೆಗಳಲ್ಲಿ ಎಲ್ಲರಿಗೂ ಚಿಕಿತ್ಸೆ ನೀಡಬಹುದಾಗಿದ್ದು, ರಾಜ್ಯ ಸರ್ಕಾರ ನಿರ್ವಹಣೆ ಮಾಡುತ್ತಿರುವ ಆಸ್ಪತ್ರೆಗಳಲ್ಲಿ ಕೇವಲ ದೆಹಲಿ ಜನರಿಗೆ ಮಾತ್ರ ಸೀಮಿತ ಎಂದು ಕೇಜ್ರಿವಾಲ್ ಸ್ಪಷ್ಟನೆ ನೀಡಿದ್ದಾರೆ.
ನ್ಯೂರೋ ಸರ್ಜರಿಯಂಥ ವಿಶೇಷ ಚಿಕಿತ್ಸೆ ನೀಡುವ ಆಸ್ಪತ್ರೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಖಾಸಗಿ ಆಸ್ಪತ್ರೆಗಳಿಗೂ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಅನ್ವಯವಾಗಲಿದೆ.
ಇದರ ಜೊತೆಗೆ ಮಾತನಾಡಿದ ಅವರು, ಮುಂಜಾಗ್ರತಾ ಕ್ರಮಗಳೊಂದಿಗೆ ನಾಳೆಯಿಂದ ಎಲ್ಲಾ ರೆಸ್ಟೋರೆಂಟ್ಗಳು, ಮಾಲ್ಗಳು, ದೇವಾಲಯಗಳು ತೆರೆದಿರುತ್ತವೆ. ಹೋಟೆಲ್ ಹಾಗೂ ಬ್ಯಾಂಕ್ವೆಟ್ ಹಾಲ್ಗಳು ಎಂದಿನಂತೆ ಮುಚ್ಚಿರುತ್ತವೆ ಎಂದಿದ್ದಾರೆ.
ಕೊರೊನಾ ನಿಯಂತ್ರಣದ ವಿಚಾರವಾಗಿ ಮಾತನಾಡಿದ ಅವರು ಸೋಂಕಿನ ಕುರಿತು ಎಲ್ಲರೂ ಜಾಗರೂಕರಾಗಿರಬೇಕು. ಅದ್ರಲ್ಲೂ ಮಕ್ಕಳು ಹಾಗೂ ವೃದ್ಧರಿಗೆ ವಿಶೇಷ ಕಾಳಜಿ ವಹಿಸಬೇಕಾದ ಅಗತ್ಯವಿದೆ ಎಂದು ದೆಹಲಿಗರಲ್ಲಿ ಮನವಿ ಮಾಡಿದರು.