ETV Bharat / bharat

10 ಸಾವಿರ ರೋಗಿಗಳಿಗೆ ಚಿಕಿತ್ಸಾ ಸಾಮರ್ಥ್ಯವಿರುವ ವಿಶ್ವದ ಅತಿದೊಡ್ಡ ಕೋವಿಡ್‌ ಆಸ್ಪತ್ರೆ ಲೋಕಾರ್ಪಣೆ - ಸರ್ದಾರ್ ವಲ್ಲಭಭಾಯಿ ಪಟೇಲ್ ಕೋವಿಡ್​ ಆಸ್ಪತ್ರೆ

ದೆಹಲಿ-ಹರಿಯಾಣ ಗಡಿ ಸಮೀಪವಿರುವ ಚಟ್ಟರ್‌ಪುರ ಪ್ರದೇಶದಲ್ಲಿ ಪ್ರಪಂಚದಲ್ಲೇ ಅತಿದೊಡ್ಡ ಕೋವಿಡ್​ ಕೇಂದ್ರ ಸ್ಥಾಪನೆಯಾಗಿದೆ. 10 ಸಾವಿರ ಬೆಡ್​ಗಳ ಸಾಮರ್ಥ್ಯ ಹೊಂದಿರುವ ಈ ಕೇಂದ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಉದ್ಘಾಟಿಸಿದರು.

COVID-19 care centre
ಕೋವಿಡ್​ ಆಸ್ಪತ್ರೆ
author img

By

Published : Jul 5, 2020, 12:07 PM IST

ನವದೆಹಲಿ: 10 ಸಾವಿರ ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ವಿಶ್ವದ ಅತಿದೊಡ್ಡ ಕೋವಿಡ್​ ಆಸ್ಪತ್ರೆ ರಾಷ್ಟ್ರ ರಾಜಧಾನಿಯಲ್ಲಿ ಸ್ಥಾಪನೆಯಾಗಿದ್ದು, ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಇಂದು ಉದ್ಘಾಟಿಸಿದರು.

ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿ ರೋಗಿಗಳನ್ನು ದಾಖಲಿಸಲು ಬೆಡ್​ಗಳ ಕೊರತೆ ಉಂಟಾಗಿತ್ತು. ಅಲ್ಲದೇ ಮನೆಗಳಲ್ಲೇ ಐಸೊಲೇಷನ್​ ವಾರ್ಡ್​ಗಳಾಗಿ ಮಾಡುವ ಪರಿಸ್ಥಿತಿ ಬಂದೊದಗಿತ್ತು. ಈ ಕೊರತೆ ನೀಗಿಸಲು ಕೇಂದ್ರ ಗೃಹ ಸಚಿವಾಲಯದ ಸಹಾಯದೊಂದಿಗೆ ನೂತನ 'ಸರ್ದಾರ್ ವಲ್ಲಭಭಾಯಿ ಪಟೇಲ್ ಕೋವಿಡ್​ ಆಸ್ಪತ್ರೆ'​ ಸ್ಥಾಪಿಸಲಾಗಿದೆ.

ದೆಹಲಿಯಲ್ಲಿ ವಿಶ್ವದ ಅತಿದೊಡ್ಡ ಕೋವಿಡ್​ ಆಸ್ಪತ್ರೆ ಉದ್ಘಾಟನೆ

ವಿಶ್ವದಲ್ಲೇ ಅತಿದೊಡ್ಡ ಕೋವಿಡ್​ ಆಸ್ಪತ್ರೆ:

ದೆಹಲಿ-ಹರಿಯಾಣ ಗಡಿ ಸಮೀಪವಿರುವ ಚಟ್ಟರ್‌ಪುರ ಪ್ರದೇಶದಲ್ಲಿರುವ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಆವರಣದಲ್ಲಿ ನಿರ್ಮಿಸಲಾಗಿರುವ ಪ್ರಪಂಚದಲ್ಲೇ ಅತಿದೊಡ್ಡ ಕೋವಿಡ್​ ಕೇಂದ್ರ ಇದಾಗಿದೆ. ಈ ಕೇಂದ್ರವು 1,700 ಅಡಿ ಉದ್ದ, 700 ಅಡಿ ಅಗಲ ವಿಸ್ತೀರ್ಣವಿದೆ. 200 ಕೊಠಡಿಗಳನ್ನು ಹೊಂದಿದ್ದು, ತಲಾ 50 ಹಾಸಿಗೆಗಳಿವೆ.

10,000 ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಸಾಮರ್ಥ್ಯ ಹೊಂದಿರುವ ಈ ಆಸ್ಪತ್ರೆಯಲ್ಲಿ 1,000 ವಿಶೇಷ ತೀವ್ರ ನಿಗಾ ಘಟಕದ ಬೆಡ್​ಗಳು ಹಾಗೂ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯಿದೆ.

ವೈದ್ಯರು ಸೇರಿದಂತೆ 2,000 ಕ್ಕೂ ಹೆಚ್ಚು ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಮತ್ತು ಇತರ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಸಿಬ್ಬಂದಿ ಆಸ್ಪತ್ರೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. 75 ಕ್ಕೂ ಅಧಿಕ ಆ್ಯಂಬುಲೆನ್ಸ್​ ಸೌಲಭ್ಯವಿದೆ.

ವಾರ್ಡ್‌ಗಳಿಗೆ ಹುತಾತ್ಮ ಯೋಧರ ಹೆಸರು:

ಇನ್ನೊಂದು ವಿಶೇಷವೆಂದರೆ ಗಾಲ್ವಾನ್ ಸಂಘರ್ಷದಲ್ಲಿ ಹುತಾತ್ಮರಾದ ಯೋಧರ ಹೆಸರನ್ನು ಸರ್ದಾರ್ ವಲ್ಲಭಭಾಯಿ ಪಟೇಲ್ ಕೋವಿಡ್​ ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ಹೆಸರಿಸಲು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ನಿರ್ಧರಿಸಿದೆ. ಆಸ್ಪತ್ರೆಯಲ್ಲಿರುವ ಐಸಿಯು ಮತ್ತು ವೆಂಟಿಲೇಟರ್ ವಾರ್ಡ್‌ಗೆ 'ಕರ್ನಲ್ ಬಿ ಸಂತೋಷ್ ಬಾಬು ವಾರ್ಡ್' ಎಂದು ಹೆಸರಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.