ನವದೆಹಲಿ: ಜಮ್ಮು ಮತ್ತು ಕಾಶ್ಮೀರದಿಂದ ನಾಲ್ಕರಿಂದ ಐವರು ಉಗ್ರರು ರಾಷ್ಟ್ರ ರಾಜಧಾನಿಗೆ ಪ್ರವೇಶಿಸಿ, ದಾಳಿ ನಡೆಸಲು ಯತ್ನಿಸುವ ಸಾಧ್ಯತೆಯ ಬಗ್ಗೆ ಗುಪ್ತಚರ ಇಲಾಖೆ ಸುಳಿವು ನೀಡಿದೆ. ಈ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಬಸ್, ಕಾರು ಅಥವಾ ಟ್ಯಾಕ್ಸಿ ಮೂಲಕ ಭಯೋತ್ಪಾದಕರು ದೆಹಲಿ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಪೊಲೀಸರಿಗೆ ಎಚ್ಚರಿಕೆ ನೀಡಿದೆ. ಹೀಗಾಗಿ ಎಲ್ಲಾ ಬಸ್ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ದೆಹಲಿಯ ಎಲ್ಲ ಜಿಲ್ಲೆಗಳ ಉಪ ಪೊಲೀಸ್ ಆಯುಕ್ತರು (ಡಿಸಿಪಿ), ಅಪರಾಧ ಶಾಖೆ ಹಾಗೂ ಇತರೆ ವಿಶೇಷ ಘಟಕಗಳ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ಪೂರ್ವ ಲಡಾಖ್ನಲ್ಲಿ ಭಾರತ-ಚೀನಾ ಸಂಘರ್ಷದ ಬಳಿಕ ಭಾರತೀಯ ಭದ್ರತಾ ಸಂಸ್ಥೆಗಳು ಹೆಚ್ಚಿನ ಜಾಗರೂಕತೆ ವಹಿಸಿವೆ.