ನವದೆಹಲಿ : ಇಂದು ಮತ್ತು ನಾಳೆ ಯಾವುದೇ ಸಾರ್ವಜನಿಕ ಕೂಟಕ್ಕೆ ಅವಕಾಶ ನೀಡದಿರಲು ದೆಹಲಿ ಪೊಲೀಸರು ಮುಂದಾಗಿದ್ದಾರೆ.
ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಆದೇಶದ ಹಿನ್ನೆಲೆ ಜನರು ತಮ್ಮ ತಮ್ಮ ಮನೆಗಳಲ್ಲಿಯೇ ಹೊಸ ವರ್ಷ ಆಚರಣೆ ಮಾಡಲು ಸಲಹೆ ನೀಡಿದ್ದಾರೆ. ಪೊಲೀಸ್ ಉನ್ನತ ಅಧಿಕಾರಿಗಳ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಎರಡೂ ದಿನಗಳಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6ರ ವರೆಗೆ ಇಂಡಿಯಾ ಗೇಟ್, ಕೊನಾಟ್ ಪ್ಲೇಸ್‌ನಂತಹ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಗುಂಪು ಗೂಡುವುದನ್ನು ಅನುಮತಿಸಲಾಗುವುದಿಲ್ಲ. ಪರವಾನಗಿ ಪಡೆದ ಆವರಣಗಳಲ್ಲಿ ಮಾತ್ರ ಇದರಿಂದ ವಿನಾಯಿತಿ ನೀಡಲಾಗಿದೆ ಎಂದು ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಈಶ್ ಸಿಂಘಾಲ್ ಮಾಹಿತಿ ನೀಡಿದ್ದಾರೆ.
ಕೆಲವು ಸ್ಥಳಗಳಲ್ಲಿ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗುತ್ತದೆ ಎಂದ ಅವರು, ಹೊಸ ವರ್ಷವನ್ನು ಸಾಧ್ಯವಾದಲ್ಲಿ ತಮ್ಮ ಮನೆಯಲ್ಲಿಯೇ ಸಂಭ್ರಮಾಚರಣೆ ಮಾಡಲು ನಾವು ಜನರಿಗೆ ಸಲಹೆ ನೀಡುತ್ತೇವೆ ಎಂದು ಹೇಳಿದ್ದಾರೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಡಿಸೆಂಬರ್ 31 ಮತ್ತು ಜನವರಿ 1 ರಂದು ರಾತ್ರಿ 11 ಗಂಟೆಯಿಂದ ರಾಷ್ಟ್ರ ರಾಜಧಾನಿಯಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಆದೇಶಿಸಿದೆ.