ನವದೆಹಲಿ: ಹಥ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ವ್ಯಕ್ತಿಗಳ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಎನ್‌ಜಿಟಿ ಆದೇಶ ಉಲ್ಲಂಘನೆ, ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ, ಕೋವಿಡ್-19 ದೃಷ್ಟಿಯಿಂದ ಸಿಆರ್‌ಪಿಸಿ ಸೆಕ್ಷನ್ 144 ಮತ್ತು ಇತರ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಹಥ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಅನೇಕ ರಾಜಕೀಯ ಪಕ್ಷಗಳ ಸದಸ್ಯರು, ವಿವಿಧ ಸಂಘಟನೆಗಳು ಮತ್ತು ಎನ್‌ಜಿಒಗಳು ನವದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದ್ದವು. ಕೆಲವರು ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಭಟನಾಕಾರರು ಕೋವಿಡ್-19ಗೆ ಸಂಬಂಧಿಸಿದಂತೆ ಸೆಕ್ಷನ್ 144 ಸಿಆರ್‌ಪಿಸಿ ಮತ್ತು ಇತರ ಕಾನೂನುಗಳ ಅಡಿಯಲ್ಲಿ ಆದೇಶವನ್ನು ಉಲ್ಲಂಘಿಸಿರುವುದರಿಂದ ಸೆಕ್ಷನ್ 188, ಸಾಂಕ್ರಾಮಿಕ ಕಾಯ್ದೆ ಮತ್ತು 51 (ಬಿ) ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ಇತರ ಸದಸ್ಯರೊಂದಿಗೆ ಹಥ್ರಾಸ್ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಖಂಡಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲು ಜಂತರ್ ಮಂತರ್ಗೆ ತೆರಳಿದ್ದರು.