ETV Bharat / bharat

ದೆಹಲಿ ಕೊರೊನಾ ವಿರುದ್ಧ ಹೋರಾಡಲು ಕೈಜೋಡಿಸಿದ ಕೇಂದ್ರ: ಹೆಚ್ಚು ಟೆಸ್ಟ್​ ಕಿಟ್​ಗಳ ಪೂರೈಕೆ

ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರನ್ನು ಪತ್ತೆ ಹಚ್ಚಲು ಹಾಗೂ ನಿಯಂತ್ರಣಕ್ಕೆ ಕೇಂದ್ರ ಹಾಗೂ ದೆಹಲಿ ಸರ್ಕಾರಗಳು ಜಂಟಿಯಾಗಿ ಕಾರ್ಯತಂತ್ರ ರೂಪಿಸಲು ಇಂದಿನ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

amit sha meeting
ಅಮಿತ್​ ಶಾ ಸಭೆ
author img

By

Published : Jun 14, 2020, 1:48 PM IST

Updated : Jun 14, 2020, 1:56 PM IST

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರನ್ನು ಪತ್ತೆಹಚ್ಚಲು ಇನ್ನೂ ಹೆಚ್ಚು ಕೋವಿಡ್-19 ಟೆಸ್ಟ್​ ಕಿಟ್​ಗಳನ್ನು ಪಡೆದುಕೊಳ್ಳಲಿದೆ ಹಾಗೂ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಗಳು ಒಟ್ಟಾಗಿ ಕೊರೊನಾ ನಿಯಂತ್ರಣಕ್ಕೆ ಯೋಜನೆ ರೂಪಿಸಲು ಈ ದಿನದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಮಿತ್​ ಶಾ ಸಭೆ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​, ಲೆಫ್ಟಿನೆಂಟ್​ ಗವರ್ನರ್​ ಅನಿಲ್​ ಬೈಜಾಲ್​ ಜೊತೆ ಸಭೆ ನಡೆಸಿದ ಕೇಂದ್ರ ಗೃಹ ಮಂತ್ರಿ ಅಮಿತ್​ ಶಾ ಹಾಗೂ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಕೊರೊನಾ ವಿರುದ್ಧ ಒಟ್ಟಾಗಿ ಹೋರಾಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇದು ಮೊದಲ ಸುತ್ತಿನ ಸಭೆಯಾಗಿದ್ದು, ಸುಮಾರು 75 ನಿಮಿಷಗಳ ಕಾಲ ನಡೆಯಿತು. ಮತ್ತೊಂದು ಸಭೆ ಸಂಜೆ ಐದು ಗಂಟೆಗೆ ನಿಗದಿಯಾಗಿದ್ದು, ಈ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್​ ಭಲ್ಲ, ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಪ್ರೀತಿ ಸೂಡನ್​, ಏಮ್ಸ್​ನ ನಿರ್ದೇಶಕ ಡಾ. ರಂದೀಪ್​ ಗುಲಾರಿಯಾ ಜೊತೆಗೆ ನೀತಿ ಆಯೋಗದ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಈಗ ನಡೆದ ಸಭೆಯಲ್ಲಿ ಮೂಲಗಳ ಪ್ರಕಾರ ಸಿಎಂ ಕೇಜ್ರಿವಾಲ್​ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೆಹಲಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಿದರು. ಜೊತೆಗೆ ಮುಂದಿನ ದಿನಗಳಲ್ಲಿ ಬೇಕಾಗಿರುವ ಸೌಲಭ್ಯಗಳ ಬಗ್ಗೆಯೂ ಈ ವೇಳೆ ಮನವಿ ಸಲ್ಲಿಸಿದರು.

ಜೂನ್​ 10ರಂದು ಅಮಿತ್​ ಶಾ ಹಾಗೂ ಸಿಎಂ ಅರವಿಂದ್ ಕೇಜ್ರಿವಾಲ್​ ಸಭೆ ನಡೆಸಿ ಕೊರೊನಾ ಕುರಿತು ಚರ್ಚೆ ನಡೆಸಿದ್ದರು. ಈಗ ಮತ್ತೊಮ್ಮೆ ಸಭೆ ನಡೆಸಿ ದೆಹಲಿಯಲ್ಲಿ ಕೊರೊನಾ ಕುರಿತು ಚರ್ಚಿಸಿ ಕೊರೊನಾ ವಿರುದ್ಧ ಕೇಂದ್ರ ಹಾಗೂ ದೆಹಲಿ ಸರ್ಕಾರ ಒಟ್ಟಾಗಿ ಸೆಣಸುವ ನಿರ್ಧಾರಕ್ಕೆ ಬಂದಿದ್ದಾರೆ.

Last Updated : Jun 14, 2020, 1:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.