ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ಇಂದು ಸಹ ಕೋವಿಡ್ -19 ಪರೀಕ್ಷೆ ಮಾಡಿಕೊಂಡಿದ್ದು ವರದಿಗಾಗಿ ಕಾಯುತ್ತಿರುವುದಾಗಿ ತಿಳಿದು ಬಂದಿದೆ.
ಸೋಮವಾರ ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆ ಕಾರಣದಿಂದ ಸಚಿವರನ್ನು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಅವರ ವರದಿ ನೆಗೆಟಿವ್ ಎಂದು ಬಂದಿತ್ತು.
-
Due to high grade fever and a sudden drop of my oxygen levels last night I have been admitted to RGSSH. Will keep everyone updated
— Satyendar Jain (@SatyendarJain) June 16, 2020 " class="align-text-top noRightClick twitterSection" data="
">Due to high grade fever and a sudden drop of my oxygen levels last night I have been admitted to RGSSH. Will keep everyone updated
— Satyendar Jain (@SatyendarJain) June 16, 2020Due to high grade fever and a sudden drop of my oxygen levels last night I have been admitted to RGSSH. Will keep everyone updated
— Satyendar Jain (@SatyendarJain) June 16, 2020
ಇನ್ನು ಕಳೆದ ರಾತ್ರಿ ಮತ್ತೆ ತೀವ್ರ ಜ್ವರ ಹಾಗೂ ಹಠಾತ್ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಹಾಗಾಗಿ ಇಂದು ಮತ್ತೆ ಕೋವಿಡ್ -19 ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ ವರದಿಗಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾಳಜಿ ವಹಿಸಿರುವ ಸತ್ಯೇಂದರ್ ಜೈನ್, ದಿನದ ಪೂರ್ತಿ ಜನರ ಸೇವೆಯಲ್ಲಿರುತ್ತೀರಿ, ದಯವಿಟ್ಟು ನಿಮ್ಮ ಆರೋಗ್ಯದ ಬಗ್ಗೆ ಗಮನ ಕೊಡಿ ಎಂದು ಸಲಹೆ ನೀಡಿದ್ದಾರೆ.
ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇತ್ತೀಚೆಗೆ ಕೊರೊನಾ ಪರೀಕ್ಷೆಗೆ ಗುರಿಪಡಿಸಲಾಗಿತ್ತು.