ನವದೆಹಲಿ: ಜಾಮಿಯಾ ವಿಶ್ವವಿದ್ಯಾಲಯದ ಎಲ್ಲ ಬಂಧಿತ ವಿದ್ಯಾರ್ಥಿಗಳನ್ನು ಕಲ್ಕಾಜಿ ಹಾಗೂ ನ್ಯೂ ಫ್ರೆಂಡ್ಸ್ ಕಾಲೋನಿ (ಎನ್‌ಎಫ್‌ಸಿ) ಪೊಲೀಸ್ ಠಾಣೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
-
MS Randhawa, PRO Delhi Police: All detained students have been released from Kalkaji and New Friends Colony. pic.twitter.com/1Plzfp3tfV
— ANI (@ANI) December 15, 2019 " class="align-text-top noRightClick twitterSection" data="
">MS Randhawa, PRO Delhi Police: All detained students have been released from Kalkaji and New Friends Colony. pic.twitter.com/1Plzfp3tfV
— ANI (@ANI) December 15, 2019MS Randhawa, PRO Delhi Police: All detained students have been released from Kalkaji and New Friends Colony. pic.twitter.com/1Plzfp3tfV
— ANI (@ANI) December 15, 2019
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು 50 ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ಪೊಲೀಸರ ಕ್ರಮ ಖಂಡಿಸಿ ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಎದುರು ಮಧ್ಯರಾತ್ರಿವರೆಗೂ ಜಾಮಿಯಾ ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆ ಕೈಬಿಡುವಂತೆ ದೆಹಲಿ ಪೊಲೀಸರು ಪ್ರತಿಭಟನಾಕಾರರಿಗೆ ಮನವಿ ಮಾಡಿಕೊಂಡಿದ್ದು, ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗುವುದು ಎಂದು ತಿಳಿದ್ದರು. ಈಗ ಕಲ್ಕಾಜಿ ಠಾಣೆಯಿಂದ 35 ವಿದ್ಯಾರ್ಥಿಗಳು ಹಾಗೂ ನ್ಯೂ ಫ್ರೆಂಡ್ಸ್ ಕಾಲೋನಿ ಠಾಣೆಯಿಂದ 15 ವಿದ್ಯಾರ್ಥಿಗಳು ಸೇರಿ ಎಲ್ಲ ಬಂಧಿತ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಪೊಲೀಸ್ ಪಿಆರ್ಒ ಎಂ.ಎಸ್.ರಾಂಧವಾ ತಿಳಿಸಿದ್ದಾರೆ.