ETV Bharat / bharat

ತಲೆಗೆ ಗುಂಡು ಹಾರಿಸಿ ಬಿಜೆಪಿ ಮುಖಂಡನ ಹತ್ಯೆ... ಸಿಸಿಟಿವಿಯಲ್ಲಿ ದೃಶ್ಯ ಸೆರೆ - Dhanbad of Jharkhand

ಪಕ್ಷದ ಕೆಂಡುವಾ ಘಟಕದ ಉಪಾಧ್ಯಕ್ಷರಾಗಿದ್ದ ಸತೀಶ್ ಸಿಂಗ್ ತಮ್ಮ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಇಬ್ಬರು ಮುಖ ಮುಚ್ಚಿಕೊಂಡು ಮೋಟಾರ್​ ಬೈಕ್​ನಲ್ಲಿ ಹಿಂದಿನಿಂದ ಬಂದು ತಲೆಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

Dhanbad: BJP leader shot dead in broad daylight
ಬೈಕ್​ನಲ್ಲಿ ಬಂದು ಬಿಜೆಪಿ ಮುಖಂಡನ ತಲೆಗೆ ಗುಂಡು ಹಾರಿಸಿ ಕೊಂದು ಪರಾರಿ
author img

By

Published : Aug 20, 2020, 9:16 AM IST

ಧನ್ಬಾದ್(ಜಾರ್ಖಂಡ್​): 40 ವರ್ಷದ ಬಿಜೆಪಿ ಮುಖಂಡನೊಬ್ಬನ ಮೇಲೆ ಬಂದೂಕುಧಾರಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಧನ್ಬಾದ್​ನ ಬ್ಯಾಂಕ್ ಮೋರ್ ಪ್ರದೇಶದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ಮುಖಂಡನ ಹತ್ಯೆ

ಪಕ್ಷದ ಕೆಂಡುವಾ ಘಟಕದ ಉಪಾಧ್ಯಕ್ಷರಾಗಿದ್ದ ಸತೀಶ್ ಸಿಂಗ್ ತಮ್ಮ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಇಬ್ಬರು ಮುಖ ಮುಚ್ಚಿಕೊಂಡು ಮೋಟಾರ್​ ಬೈಕ್​ನಲ್ಲಿ ಹಿಂದಿನಿಂದ ಬಂದು ತಲೆಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಕೂಡಲೇ ಸಿಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುಲಾಯಿತಾದರೂ ಸಾವನ್ನಪ್ಪಿದ್ದಾರೆ.

ಈ ಘಟನೆ ಹತ್ತಿರದ ಮನೆಯಲ್ಲಿ ಹಾಕಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತನಿಖೆ ಪ್ರಾರಂಭವಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಆರ್.ರಾಮ್‌ಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.