ನವದೆಹಲಿ: ಅನಾರೋಗ್ಯ ಕಾರಣದಿಂದ ಆರ್ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆರೋಗ್ಯ ಕೊಂಚ ಸುಧಾರಿಸಿದ್ದು, ಪೊಲೀಸರು ತಿಹಾರ್ ಜೈಲಿಗೆ ಕರೆದೊಯ್ದಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಡಿಕೆಶಿ, 2 ದಿನಗಳಿಂದ ರಕ್ತದೊತ್ತಡದ ಕಾರಣದಿಂದ ಆರ್ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ತಿಹಾರ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಇನ್ನು ಮಧ್ಯಾಹ್ನ 3:30ಕ್ಕೆ ವಿಶೇಷ ನ್ಯಾಯಾಲಯದಲ್ಲಿ ಡಿ.ಕೆ.ಶಿವಕುಮರ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು ಜೈಲಾ? ಅಥವಾ ಬೇಲಾ? ಎಂದು ನಿರ್ಧಾರ ವಾಗಲಿದೆ.