ನವದೆಹಲಿ: ಕಷ್ಟದ ಸಮಯದಲ್ಲಿ ನನಗೆ ಬೆಂಬಲ ನೀಡಿದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಧನ್ಯವಾದಗಳು ಎಂದು ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ತಿಹಾರ್ ಜೈಲಿನಿಂದ ಹೊರ ಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ನಿಮ್ಮೆಲ್ಲರ ಶುಭ ಹಾರೈಕೆಯಿಂದ ನನಗೆ ಜಾಮೀನು ಸಿಕ್ಕಿದೆ. ನನಗೆ ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದಿದ್ದಾರೆ.
ಷರತ್ತುಬದ್ಧ ಜಾಮೀನು!
ಬರೋಬ್ಬರಿ 50 ದಿನಗಳ ಕಾಲ ಜೈಲಿನಲ್ಲಿ ಕಳೆದಿರುವ ಡಿಕೆಶಿಗೆ ಕೋರ್ಟ್ 25 ಲಕ್ಷ ರೂಪಾಯಿ ಬಾಂಡ್, ಪಾಸ್ಪೋರ್ಟ್ ನ್ಯಾಯಾಲಯದ ವಶಕ್ಕೆ ನೀಡುವುದರ ಜತೆಗೆ ಅಗತ್ಯವಿದ್ದಾಗ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ ಜಾಮೀನು ನೀಡಲಾಗಿದೆ.