ಚೆನ್ನೈ: ನಟ, ರಾಜಕಾರಣಿ ಡಿಎಂಡಿಕೆ ಪಕ್ಷದ ಅಧ್ಯಕ್ಷ ವಿಜಯಕಾಂತ್ಗೆ ಕೊರೊನಾ ಸೋಂಕು ಧೃಢಪಟ್ಟಿದ್ದು, ಚೆನ್ನೈನ ಎಂಐಒಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಆಸ್ಪತ್ರೆ ಮೂಲಗಳ ಪ್ರಕಾರ, ವಿಜಯಕಾಂತ್ ಆರೋಗ್ಯ ಸ್ಥಿರವಾಗಿದೆ. ಸಂಪೂರ್ಣ ಚೇತರಿಸಿಕೊಂಡ ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ. ಸೆ. 23 ರಂದು ( ನಿನ್ನೆ) ವಿಜಯಕಾಂತ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಎಂಐಒಟಿ ಆಸ್ಪತ್ರೆಗೆ ದಾಖಲಾಗಿದ್ದರು.
ಪಕ್ಷದ ಮೂಲಗಳ ಮಾಹಿತಿ ಪ್ರಕಾರ, ವಿಜಯಕಾಂತ್ ಅವರು ಆರು ತಿಂಗಳಿಗೊಮ್ಮೆ ಸಾಮಾನ್ಯ ಆರೋಗ್ಯ ತಪಾಸಣೆಗೆ ಒಳಪಡುತ್ತಾರೆ. ಈ ಬಾರಿ ತಪಾಸಣೆಗೆ ತೆರಳಿದ ವೇಳೆ ಕೊರೊನಾದ ಲಘು ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ಅವರು ಕೊರೊನಾ ಪರೀಕ್ಷೆ ಮಾಡಿಸಿದ್ದರು. ವರದಿಯಲ್ಲಿ ಕೊರೊನಾ ಪಾಟಿಸಿವ್ ಬಂದಿತ್ತು. ಚಿಕಿತ್ಸೆಯ ಬಳಿಕ ಅವರ ಆರೋಗ್ಯ ಸುಧಾರಿಸಿದೆ ಎಂದು ತಿಳಿದು ಬಂದಿದೆ.