ಈರೋಡ್ (ತಮಿಳುನಾಡು): ಮುಂದಿನ ಏಪ್ರಿಲ್- ಮೇ ತಿಂಗಳಲ್ಲಿ ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷ ಅಧಿಕಾರಕ್ಕೆ ಬಂದರೆ, ವಿದ್ಯಾರ್ಥಿಗಳು ಪಡೆದುಕೊಂಡಿರುವ ಶೈಕ್ಷಣಿಕ ಸಾಲ ಮನ್ನಾ ಮಾಡುವುದಾಗಿ ಪಕ್ಷದ ಅಧ್ಯಕ್ಷ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಎಂ.ಕೆ ಸ್ಟಾಲಿನ್ ಭರವಸೆ ನೀಡಿದ್ದಾರೆ.
ಈರೋಡ್ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿ ಮೆಟ್ಟುಪಾಳಯಂ ಗ್ರಾಮದಲ್ಲಿ ನಡೆದ ಡಿಎಂಕೆ ಪಕ್ಷದ ಸಮಾವೇಶದಲ್ಲಿ ಅವರು ಈ ಮಾತನ್ನು ಹೇಳಿದ್ದಾರೆ. ರಾಜ್ಯದ ಆಡಳಿತಾರೂಢ ಎಐಡಿಎಂಕೆ ಭ್ರಷ್ಟ ಪಕ್ಷವಾಗಿದೆ. ಸರ್ಕಾರದ ಎಲ್ಲಾ ಮಂತ್ರಿಗಳು ಸಮರ್ಥವಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ರಾಜ್ಯದಲ್ಲಿ ನಿರುದ್ಯೋಗ ಮಟ್ಟ ಹೆಚ್ಚುತ್ತಿದ್ದು, ಶಿಕ್ಷಣದ ಗುಣಮಟ್ಟ ಕ್ಷೀಣಿಸುತ್ತಿದೆ ಎಂದು ಸ್ಟಾಲಿನ್ ಹೇಳಿದರು.
ಓದಿ: ಐವರು ನ್ಯಾಯಾಧೀಶರಿಗೆ ಭಡ್ತಿ: 25 ಹೈಕೋರ್ಟ್ಗಳ ಪೈಕಿ 24ರ ಮುಖ್ಯ ನ್ಯಾಯಮೂರ್ತಿ ಸ್ಥಾನ ಭರ್ತಿ
ರಾಜ್ಯ ಸರ್ಕಾರ ಗ್ರಾಮೀಣ ಭಾಗದ ಜನರಿಗೆ 100 ದಿನ ಕೆಲಸ ನೀಡುವ ಯೋಜನೆಗೆ ಸರಿಯಾಗಿ ಅನುದಾನ ನೀಡುತ್ತಿಲ್ಲ. ಕೇಂದ್ರ ಸರ್ಕಾರ 100 ದಿನಗಳ ಕೆಲಸವನ್ನು 150 ದಿನಕ್ಕೆ ಏರಿಸಿ, ದಿನಗೂಲಿ ನೀಡಬೇಕು ಎಂದು ಆಗ್ರಹಿಸಿದರು. ಇದಕ್ಕೂ ಮೊದಲು, ಸ್ವಾತಂತ್ರ್ಯ ಹೋರಾಟಗಾರ ವೀರ ಪಾಂಡಿಯಾ ಕಟ್ಟಬೊಮ್ಮನ್ ಅವರ 262 ನೇ ಜನ್ಮ ದಿನಾಚರಣೆಯ ಭಾಗವಾಗಿ ಸ್ಟಾಲಿನ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.