ನವದೆಹಲಿ: ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಆಸ್ಪತ್ರೆ ಸಿಬ್ಬಂದಿಗೆ ಕೊರೊನಾ ವೈರಸ್ ತಗುಲಿರುವುದು ಮತ್ತಷ್ಟು ಆತಂಕಕ್ಕೊಳಗಾಗುವಂತೆ ಮಾಡಿದೆ.
ದೆಹಲಿ ರಾಜ್ಯ ಕ್ಯಾನ್ಸರ್ ಆಸ್ಪತ್ರೆಯಲ್ಲಿನ ಒಟ್ಟು 21 ವೈದ್ಯ ಸಿಬ್ಬಂದಿಗೆ ಈ ಸೋಂಕು ಕಾಣಿಸಿಕೊಂಡಿದೆ. ವೈದ್ಯರು, ನರ್ಸ್ ಹಾಗೂ ಪೌರಕಾರ್ಮಿಕರಲ್ಲೂ ಈ ಸೋಂಕು ಕಾಣಿಸಿಕೊಂಡಿರುವ ಕಾರಣ ಅವರಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಆಸ್ಪತ್ರೆಯಲ್ಲಿನ 45 ಸಿಬ್ಬಂದಿಯನ್ನು ಕ್ವಾರಂಟೈನ್ನಲ್ಲಿ ಇಡಲಾಗಿದೆ.
ನವದೆಹಲಿಯಲ್ಲಿ ಈಗಾಗಲೇ ಕೋವಿಡ್ ಸೋಂಕಿತರ ಸಂಖ್ಯೆ 650ರ ಗಡಿ ದಾಟಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೆಯಿಂದ ಹೊರಬರಬೇಕಾದರೆ ಜನರು ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯ ಎಂದು ಆದೇಶಿದ್ದಾರೆ.