ಮಥುರಾ: ಇಲ್ಲಿನ ಖಾಸಗಿ ನರ್ಸಿಂಗ್ ಹೋಂನ ವೈದ್ಯ ದಂಪತಿಗೆ ಕೋವಿಡ್-19 ದೃಢಪಟ್ಟ ಹಿನ್ನೆಲೆ 24 ಸಿಬ್ಬಂದಿಯನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದ ಕೂಡಲೇ ಇತರ ಸಿಬ್ಬಂದಿಯನ್ನು ಕೃಷ್ಣ ಕುಟೀರ್ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸರ್ವಜ್ಞ ರಾಮ್ ಮಿಶ್ರಾ ತಿಳಿಸಿದ್ದಾರೆ.
ವೈದ್ಯ ದಂಪತಿಗಳನ್ನು ಚಿಕಿತ್ಸೆಗಾಗಿ ಕೆ.ಡಿ. ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ನರ್ಸಿಂಗ್ ಹೋಂ ಇರುವ ಕೋಸಿಕಲನ್‌ನ ಆರ್ಯ ನಗರ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ.
ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ತೆರಳಿ ಸಮೀಕ್ಷೆ ಆರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.