ಔರಂಗಾಬಾದ್(ಮಹಾರಾಷ್ಟ್ರ): ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜ್ ಹಾಗೂ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ 30 ವರ್ಷದ ವೈದ್ಯನೋರ್ವ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಔರಂಗಾಬಾದ್ನಲ್ಲಿ ನಡೆದಿದೆ.
ಬೆಗಂಪೂರ್ ಪ್ರದೇಶದಲ್ಲಿ ವಾಸವಾಗಿದ್ದ ಶಶಿಧರ್ ಗೌಡ ಆತ್ಮಹತ್ಯೆಗೆ ಶರಣಾಗಿರುವ ವೈದ್ಯ. ಡ್ರಗ್ಸ್ ಸೇವನೆ ಮಾಡಿ, ಕೈಗೆ ಚುಚ್ಚುಮದ್ದು ತೆಗೆದುಕೊಂಡು ಸಾವನ್ನಪ್ಪಿದ್ದಾಗಿ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುಂಚಿತವಾಗಿ ಸೊಸೈಡ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತಾವು ಅಂದುಕೊಂಡಿರುವಷ್ಟು ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಕಳೆದ 15 ದಿನಗಳಿಂದ ಆತ್ಮಹತ್ಯೆ ಬಗ್ಗೆ ಯೋಚಿಸುತ್ತಿದ್ದೆ ಎಂದು ಬರೆದುಕೊಂಡಿದ್ದಾರೆ ಎಂದು ಹೇಳಲಾಗ್ತಿದೆ. ಮೃತದೇಹವನ್ನ ಈಗಾಗಲೇ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.