ಗಾಜಿಯಾಬಾದ್: ಇಲ್ಲಿನ ಕ್ಯಾನ್ಸರ್ ತಜ್ಞರೊಬ್ಬರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, ಗಾಜಿಯಾಬಾದ್‌ನ ಒಟ್ಟು ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಗ್ಯ ಅಧಿಕಾರಿಗಳ ಪ್ರಕಾರ, ಸೋಂಕಿತ ವ್ಯಕ್ತಿ ಇಂದಿರಾಪುರದ ಜ್ಞಾನ ಖಾಂಡ್ 2 ನಿವಾಸಿಯಾಗಿದ್ದು, ವೃತ್ತಿಯಲ್ಲಿ ವೈದ್ಯರಾಗಿರುವ ಇವರು ದೆಹಲಿಯ ಸಾಕೇತ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಕೊರೊನಾ ಪಾಸಿಟಿವ್ ಬಂದಿರುವ ಇವರು ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಗ್ಯ ಇಲಾಖೆಯ ತಂಡವು ಜ್ಞಾನ ಖಾಂಡ್ 2 ನ ಸಂಪೂರ್ಣ ಪ್ರದೇಶವನ್ನು ಸ್ವಚ್ಛ ಮಾಡಿದ್ದಾರೆ. ಹಾಗೇ ವೈದ್ಯರ ಪತ್ನಿ ಸೇರಿದಂತೆ ಕುಟುಂಬ ಸದಸ್ಯರನ್ನು ನಿರ್ಬಂಧಿಸಲಾಗಿದೆ. ಇನ್ನೂ, ವೈದ್ಯರು ಮತ್ತು ಅವರ ಕುಟುಂಬದೊಂದಿಗೆ ಸಂಪರ್ಕಕ್ಕೆ ಬಂದ ಜನರನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದೆ.