ETV Bharat / bharat

ಲಾಕ್ ಡೌನ್ ನಡುವೆಯೂ ಮಂದಿರ ನಿರ್ಮಾಣಕ್ಕೆ ಹರಿದು ಬಂತು 4.60 ಕೋಟಿ ರೂ. ದೇಣಿಗೆ

ಲಾಕ್ ಡೌನ್ ಹಾಗೂ ಕೊರೊನಾ ಬಿಕ್ಕಟ್ಟಿನ ನಡುವೆಯೂ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನ ಖಾತೆಗಳಲ್ಲಿ 4.60 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ.

ram mandir
ram mandir
author img

By

Published : May 26, 2020, 12:56 PM IST

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ದೇಣಿಗೆ ಹರಿದು ಬರುತ್ತಿದೆ.

ಲಾಕ್ ಡೌನ್ ಹಾಗೂ ಕೊರೊನಾ ಬಿಕ್ಕಟ್ಟಿನ ನಡುವೆಯೂ ಟ್ರಸ್ಟ್​ನ ಎರಡು ಖಾತೆಗಳಲ್ಲಿ 4.60 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ.

"ದೇವಾಲಯಕ್ಕೆ ಹಣದ ಕೊರತೆಯಾಗುವುದಿಲ್ಲ ಎಂಬ ವಿಶ್ವಾಸ ನಮಗಿದೆ. ಜನರು ಮಂದಿರಕ್ಕಾಗಿ ಅಪಾರ ಪ್ರಮಾಣದ ಹಣವನ್ನು ದೇಣಿಗೆಯಾಗಿ ನೀಡುತ್ತಿದ್ದಾರೆ ಮತ್ತು ಭವ್ಯ ದೇವಾಲಯದ ನಿರ್ಮಾಣವಾಗಲಿದೆ" ಎಂದು ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.

ಮಾರ್ಚ್​ನಲ್ಲಿ ಇ-ಬ್ಯಾಂಕಿಂಗ್ ಮೂಲಕ ಜನರು ದೇಣಿಗೆ ನೀಡುವಂತೆ ಬ್ಯಾಂಕ್ ಖಾತೆಗಳ ವಿವರವನ್ನು ಟ್ರಸ್ಟ್ ಘೋಷಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.