ನವದೆಹಲಿ: ಕೇಂದ್ರ ಸರ್ಕಾರ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇಪ್ಪತ್ತೊಂದು ದಿನ ಲಾಕ್‌ಡೌನ್ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ತಿಳಿಸಿದೆ. ಅಲ್ಲದೇ ಯಾವುದೇ ಸಾಮಾಜಿಕ, ಧಾರ್ಮಿಕ ಸಭೆ ಮತ್ತು ಮೆರವಣಿಗೆಗೆ ಅವಕಾಶ ನೀಡಬಾರದೆಂದು ಸೂಚಿಸಿದೆ.
ಯಾವುದೇ ಆಕ್ಷೇಪಾರ್ಹ ವಿಷಯವನ್ನು ಪ್ರಸಾರ ಮಾಡುವವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಜಾಗ್ರತೆ ವಹಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
COVID-19ರ ವಿರುದ್ಧ ಹೋರಾಡುವ ಸಲುವಾಗಿ ಯಾವುದೇ ಸಾಮಾಜಿಕ, ಧಾರ್ಮಿಕ ಸಭೆ ಅಥವಾ ಮೆರವಣಿಗೆಗೆ ಅವಕಾಶ ನೀಡಬಾರದು. ಹಾಗೂ ಲಾಕ್‌ಡೌನ್ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕೆಂದು ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.
ಶಾಬ್-ಎ-ಬರಾತ್ ಗುರುವಾರ ಇದ್ದರೆ, ಶುಕ್ರವಾರ ಗುಡ್ ಫ್ರೈ ಡೇ, ಬೈಸಾಖಿ, ರೊಂಗಾಲಿ ಬಿಹು, ವಿಶು, ಪೊಯಿಲಾ ಬೋಯಿಶಾಕ್, ಪುತಂಡು, ಮಹಾ ವಿಶುಬಾ ಇತ್ಯಾದಿ ಆಚರಣೆಗಳು ಏಪ್ರಿಲ್ ತಿಂಗಳಿನಲ್ಲಿವೆ. ಇವೆಲ್ಲವನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ಆದೇಶ ಹೊರಡಿಸಿದೆ.