ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯ ಸಂಸತ್ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಹಾಗೂ ಜೆಡಿಎಸ್ನ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಡುವಿನ ಹಣಾಹಣಿ ಮುಗಿದರೂ ದೆಹಲಿ ಕಾಂಗ್ರೆಸ್ ಸಿಎಂಗಳ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪವಾಗಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನೀತಿ ಆಯೋಗದ ಸಭೆಗೆ ಪೂರ್ವಭಾವಿಯಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದರು.
ಈ ವೇಳೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ಅವರ ಕರ್ನಾಟಕದ ರಾಜಕಾರಣದ ಬೆಳವಣಿಗೆ ಹೇಗಿದೆ ಎಂದು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದಾಗ, 'ಚೆನ್ನಾಗಿದೆ. ನಿಧಾನವಾಗಿ ಸಾಗುತ್ತಿದೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಗೆದ್ದಿದ್ದಾರೆ' ಎಂದರು. ಜೊತೆಗೆ ಯಡಿಯೂರಪ್ಪ ಅವರ ಬಗ್ಗೆಯ ಮಾತನಾಡಿದ್ದಾರೆ.
ಈ ಸಭೆಯಲ್ಲಿ ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಹಾಗೂ ರಾಜಸ್ಥಾನದ ಅಶೋಕ್ ಗೆಹ್ಲೊಟ್ ಉಪಸ್ಥಿತರಿದ್ದರು. ಆದರೆ, ಪಂಜಾಬ್ ಸಿಎಂ,ಕ್ಯಾಪ್ಟನ್ ಅಮರೇಂದರ್ ಸಿಂಗ್ ಅವರು ಗೈರಾಗಿದ್ದರು.