ETV Bharat / bharat

ನಕಲಿ ಮದ್ಯ ಸೇವಿಸಿ ನಾಲ್ವರು ಸಾವು, ಇಬ್ಬರ ಜೀವನ್ಮರಣ ಹೋರಾಟ

ನಕಲಿ ಮದ್ಯ ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಆರು ಜನರಲ್ಲಿ ನಾಲ್ವರು ಸಾವನ್ನಪ್ಪಿ, ಇತರ ಇಬ್ಬರು ಗಂಭೀರ ಸ್ಥಿತಿಯಲ್ಲಿರುವ ಘಟನೆ ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ನಡೆದಿದೆ.

spurious liquor
ನಕಲಿ ಮದ್ಯ
author img

By

Published : May 4, 2020, 4:52 PM IST

ರತ್ಲಂ: ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಹಳ್ಳಿಯೊಂದರಲ್ಲಿ ನಕಲಿ ಮದ್ಯ ಸೇವಿಸಿ ನಾಲ್ಕು ಮಂದಿ ಸಾವನ್ನಪ್ಪಿ, ಇಬ್ಬರು ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕಲಿ ಮದ್ಯ ಸೇವಿಸಿದ ಒಟ್ಟು ಆರು ಜನರನ್ನು ಕಳೆದ ಶನಿವಾರ ಮತ್ತು ಭಾನುವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರತ್ನಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ತಿವಾರಿ ತಿಳಿಸಿದ್ದಾರೆ. ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದರೆ, ಇತರ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಸದ್ಯ ಅವರಿಗೆ ಚಿಕಿತ್ಸೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಮೃತರನ್ನು ಇಲ್ಲಿಗೆ ಸಮೀಪವಿರುವ ನಿಮಾಲಿ ಗ್ರಾಮದ ರಿತುರಾಜ್ ಸಿಂಗ್ (35) ವಿಕ್ಕಿ ಸಿಂಗ್ (21), ಜೈಸಿಂಗ್ ಸಿಂಗ್ (26) ಮತ್ತು ಅರ್ಜುನ್ ನಾಥ್ (22) ಎಂದು ಗುರುತಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.