ಪಣಜಿ: ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ರಾಜ್ಯದ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ತಲಾ 50 ಲಕ್ಷ ರೂ. ಜೀವ ವಿಮೆ ಸೌಲಭ್ಯವನ್ನು ನೀಡುವುದಾಗಿ ಗೋವಾ ಸರ್ಕಾರ ಘೋಷಿಸಿದೆ.
ಕೋವಿಡ್ನಿಂದಾಗಿ ಅಥವಾ ಕೊರೊನಾ ಸಂಬಂಧಿತ ಕರ್ತವ್ಯದಲ್ಲಿದ್ದಾಗ ಪ್ರಾಣಹಾನಿ ಸಂಭವಿಸಿದಲ್ಲಿ ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ರೂಪಾಯಿಗಳ ವಿಮೆಯನ್ನು ಒದಗಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಟ್ವೀಟ್ ಮಾಡಿದ್ದಾರೆ.
ವೈದ್ಯರು, ನರ್ಸ್ಗಳು, ಆಶಾ ಕಾರ್ಯಕರ್ತೆಯರು ಸೇರಿದಂತೆ ಗೋವಾದ ಎಲ್ಲ ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ರೂ.ಗಳ ವಿಮೆ ವಿಸ್ತರಿಸಲಾಗಿದೆ ಎಂದು ಸಾವಂತ್ ಹೇಳಿದ್ದಾರೆ.
ಗೋವಾದಲ್ಲಿ ಪ್ರಸ್ತುತ 24,185 ಕೊರೊನಾ ಕೇಸ್ಗಳಿದ್ದು, ಈ ಪೈಕಿ 5,323 ಪ್ರಕರಣಗಳು ಸಕ್ರಿಯವಾಗಿವೆ.