ಮಹಾರಾಷ್ಟ್ರ: ರಾಜ್ಯದಲ್ಲಿ ಇಂದು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಲಘು ಭೂಕಂಪ ಸಂಭವಿಸಿರುವುದಾಗಿ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹನು - ತಲಸಾರಿ ಪ್ರದೇಶದಲ್ಲಿ ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3.8ರಷ್ಟು ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಸೆ. 5ರಂದು ಸಹ ಪಾಲ್ಘರ್ನಲ್ಲಿ ಭೂಕಂಪ ವರದಿಯಾಗಿತ್ತು.
ಇನ್ನು ನಾಸಿಕ್‌ನಿಂದ ಪಶ್ಚಿಮಕ್ಕೆ 103 ಕಿ.ಮೀ. ದೂರದಲ್ಲಿ 2.5 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ.