ಪೋರ್ಟ್ ಬ್ಲೇರ್ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಬೆಳಗ್ಗೆ 4.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ 10:31ಕ್ಕೆ ಭೂಕಂಪ ಸಂಭವಿಸಿದ್ದು, ಯಾವುದೇ ಆಸ್ತಿ - ಪಾಸ್ತಿ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಭೂಕಂಪನದ ಕೇಂದ್ರ ಬಿಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿಯಾದ ಪೋರ್ಟ್ ಬ್ಲೇರ್‌ನಿಂದ ಪೂರ್ವಕ್ಕೆ 250 ಕಿ.ಮೀ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ