ಅಂಜಾವ್: ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಭೂಕಂಪ ಸಂಭವಿಸಿದ ಬಗ್ಗೆ ವರದಿಯಾಗಿದ್ದು, ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಆಗಸ್ಟ್ 6ರಂದು ತವಾಂಗ್ ಪಟ್ಟಣದ 42 ಕಿಲೋ ಮೀಟರ್ ದೂರದಲ್ಲಿ ಕೂಡ ಭೂಕಂಪ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿತ್ತು.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಆಗಸ್ಟ್ 23ರಂದು 2.7ರಿಂದ 3.1 ತೀವ್ರತೆಯಲ್ಲಿ ನಾಲ್ಕು ಸಲ ಭೂಮಿ ಕಂಪಿಸಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟ ಸಂಭವಿಸಿರಲಿಲ್ಲ.