ETV Bharat / bharat

ಅರುಣಾಚಲ ಪ್ರದೇಶದಲ್ಲಿ 3.4 ತೀವ್ರತೆಯ ಲಘು ಭೂಕಂಪ - ಅರುಣಾಚಲ ಪ್ರದೇಶದ ತವಾಂಗ್

ಅರುಣಾಚಲ ಪ್ರದೇಶದ ತವಾಂಗ್​ನಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್​ ಮಾಪನದಲ್ಲಿ 3.4 ರಷ್ಟು ತೀವ್ರತೆ ದಾಖಲಾಗಿದೆ.

Earthquake
ಲಘು ಭೂಕಂಪ
author img

By

Published : Sep 6, 2020, 11:28 AM IST

ಇಟಾನಗರ್​​ (ಅರುಣಾಚಲ ಪ್ರದೇಶ): ಇಲ್ಲಿನ ತವಾಂಗ್ ಪ್ರದೇಶದಲ್ಲಿ ಇಂದು ಬೆಳಗ್ಗೆ 7.30 ರ ಸುಮಾರಿಗೆ ಲಘು ಭೂಕಂಪ ಸಂಭವಿಸಿದೆ.

ರಿಕ್ಟರ್​ ಮಾಪನದಲ್ಲಿ 3.4 ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ.

ಈ ತಿಂಗಳಲ್ಲಿ ದೇಶದಲ್ಲಿ ನಡೆದ ಮೂರನೇ ಭೂಕಂಪ ಇದಾಗಿದೆ. ಸೆ.1 ರಂದು ಮಣಿಪುರದಲ್ಲಿ 5.1 ತೀವ್ರತೆಯ ಹಾಗೂ ಸೆ.5 ರಂದು ಮಹಾರಾಷ್ಟ್ರದ ಪಾಲ್ಘರ್​ನಲ್ಲಿ 2.7 ತೀವ್ರತೆಯ ಭೂಕಂಪ ಸಂಭವಿಸಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.