ನವದೆಹಲಿ: ನೇಪಾಳದ ಹಲವು ಪ್ರದೇಶಗಳಲ್ಲಿ ಬೆಳ್ಳಂಬೆಳಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.4ರಷ್ಟು ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದೆ.
ಕಠ್ಮಂಡುವಿನಿಂದ ಪೂರ್ವಕ್ಕೆ 50 ಕಿಲೋ ಮೀಟರ್ ದೂರದಲ್ಲಿ ಭೂಕಂಪನ ಸಂಭವಿಸಿದ್ದು, ಉತ್ತರ ಬಿಹಾರದ ಹಲವು ಪ್ರದೇಶಗಳಲ್ಲಿಯೂ ಭೂಮಿ ಕಂಪಿಸಿದೆ. ಇದರಿಂದಾಗಿ ಆತಂಕಕ್ಕೊಳಗಾದ ಸಾರ್ವಜನಿಕರು ಮನೆಗಳಿಂದ ಹೊರಗೆ ಬಂದಿದ್ದಾರೆ.
ಭೂಕಂಪದಿಂದಾಗಿ ಹಾನಿಯ ಬಗ್ಗೆ ಸದ್ಯಕ್ಕೆ ಯಾವುದೇ ವರದಿಯಾಗಿಲ್ಲ. ಇದಕ್ಕೂ ಮೊದಲು 2015ರಲ್ಲಿ ನೇಪಾಳದಲ್ಲಿ ಭೂಕಂಪನ ಸಂಭವಿಸಿದ್ದು, ಸುಮಾರು 900ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.