ನವದೆಹಲಿ: ಮೇವು ಹಗರಣದಲ್ಲಿ ಜೈಲು ಸೇರಿದ್ದರೂ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತನಿಖೆಗೆ ಆದೇಶಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬಿಹಾರದ ಮುಖ್ಯ ಚುನಾವಣಾಧಿಕಾರಿ ಹೆಚ್.ಆರ್ ಶ್ರೀನಿವಾಸ, ಜೈಲಿನಲ್ಲಿದ್ದುಕೊಂಡೇ ಲಾಲೂ ಟ್ವಿಟ್ಟರ್ ಹಾಗೂ ಫೇಸ್ಬುಕ್ ಖಾತೆ ಬಳಸುತ್ತಿದ್ದಾರೆಯೇ ಅಥವಾ ಬೇರೆ ಯಾರಾದರೂ ಹೊರಗಡೆ ಅವರ ಖಾತೆಗಳನ್ನು ನಿಬಾಯಿಸುತ್ತಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತೆ ಎಂದರು. ಲಾಲು ಜೈಲಿನಲ್ಲೇ ಸೋಶಿಯಲ್ ಮೀಡಿಯಾ ಬಳಸುತ್ತಿದ್ದರೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದೂ ಹೇಳಿದ್ದಾರೆ.
ಪಾಟ್ನಾದ ರಿಟರ್ನಿಂಗ್ ಅಧಿಕಾರಿ ಸಂಜಯ್ ಸಿಂಗ್ ಅಹ ಚುನಾವಣಾ ಪ್ಯಾನಲ್ಗೆ ಲಾಲು ಟ್ವಿಟ್ಟರ್ ಖಾತೆ ಮೇಲೆ ಕಣ್ಣಿಡುವಂತೆ ಸೂಚಿಸಿದ್ದಾರೆ.
ಬಹುಕೋಟಿ ರೂಪಾಯಿ ಮೇವು ಹಗರಣದಲ್ಲಿ ಲಾಲೂ ಅಪರಾಧಿ ಎಂದು ಸಾಬೀತಾಗಿದ್ದು, ಸದ್ಯ ಅವರು ರಾಂಚಿಯ ಬಿರ್ಸಾ ಮುಂಡ ಸೆಂಟ್ರಲ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.