ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ಕಣ್ಣಿಟ್ಟಿರುವ ಕೇಂದ್ರ ಚುನಾವಣಾ ಆಯೋಗವು ಈವರೆಗೆ ನಗದು ಸೇರಿ 340.7 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದೆ.
ಹಾಗೆಯೇ ಮಾರ್ಚ್ 10ರ ನಂತರ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ 692 ಕೋಟಿ ಮೌಲ್ಯದ ಡ್ರಗ್ಸ್ ಹಾಗೂ 255 ಕೋಟಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕೇಂದ್ರ ಸಂಸ್ಥೆಗಳು ವಶಪಡಿಸಿಕೊಂಡಿವೆ. ಇನ್ನು 68.71 ಲಕ್ಷ ಮೌಲ್ಯದ ಮದ್ಯ ಕೂಡ ಸಿಕ್ಕಿದೆ.
ಇತ್ತೀಚಿನ ವರದಿ ಪ್ರಕಾರ ತಮಿಳುನಾಡಿನಲ್ಲಿ108 ಕೋಟಿ ರೂ. ಹಾಗೂ ಆಂಧ್ರದಲ್ಲಿ 95.79 ಕೋಟಿ ರೂ. ನಗದು ಜಪ್ತಿ ಮಾಡಿಕೊಳ್ಳಲಾಗಿದೆ. ಈ ಮೂಲಕ ಅತೀ ಹೆಚ್ಚು ನಗದು ಸಿಕ್ಕ ರಾಜ್ಯಗಳಲ್ಲಿ ತಮಿಳುನಾಡು ಮೊದಲ ಹಾಗೂ ಆಂಧ್ರಪ್ರದೇಶ ಎರಡನೇ ಸ್ಥಾನದಲ್ಲಿದೆ.