ನವದೆಹಲಿ: ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂಕೋರ್ಟ್ ಕದ ತಟ್ಟಲು ನಿರ್ಧರಿಸಿದೆ.
ಕಾಂಗ್ರೆಸ್ನ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ಗೆ ವಿಚಾರಣೆ ಹಂತದಲ್ಲೇ ದೆಹಲಿ ಹೈಕೋರ್ಟ್ ಜಾಮೀನು ನೀಡಿರುವುದು ಸರಿಯಲ್ಲ. ಇದರಿಂದ ವಿಚಾರಣೆಗೆ ಅನಾನುಕೂಲ ಆಗಲಿದೆ ಎಂದಿರುವ ಜಾರಿ ನಿರ್ದೇಶನಾಲಯ ಇದೀಗ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಬುಧವಾರ ದೆಹಲಿ ಹೈಕೋರ್ಟ್ ಡಿಕೆ ಶಿವಕುಮಾರ್ ಅವರು 25 ಲಕ್ಷ ರೂ. ಬಾಂಡ್ ಇಬ್ಬರು ಜಾಮೀನು ಸೇರಿ ಹಲವು ಷರತ್ತುಗಳನ್ನ ವಿಧಿಸಿ ಬೇಲ್ ನೀಡಿತ್ತು.
ಇನ್ನೊಂದೆಡೆ ಸಿಬಿಐ ಕೂಡಾ ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಪಿ ಚಿದಂಬರಂಗೆ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.