ಕಂಗನಾ ವಿರುದ್ಧ ದೇಶದ್ರೋಹ ಕೇಸ್ಗೆ ಒತ್ತಾಯಿಸಿದ್ದ ಶಿವಸೇನೆ ಮುಖಂಡನ ಮನೆ ಮೇಲೆ ಇಡಿ ದಾಳಿ - ED Raids in Mumbai
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ತನಿಖಾ ಸಂಸ್ಥೆಯ ತಂಡಗಳು ಶೋಧ ನಡೆಸಲು ಪ್ರಾರಂಭಿಸಿವೆ. ಈ ದಾಳಿಯು ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದ್ದೇ ಎಂಬುದು ಇಡಿ ಇನ್ನೂ ದೃಢಪಡಿಸಿಲ್ಲ.
ಮುಂಬೈ: ಮಂಗಳವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಿವಸೇನೆ ಮುಖಂಡ ಪ್ರತಾಪ್ ಸರ್ನಾಯಕ್ ಅವರ ವಸತಿ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ತನಿಖಾ ಸಂಸ್ಥೆಯ ತಂಡಗಳು ಶೋಧ ನಡೆಸಲು ಪ್ರಾರಂಭಿಸಿವೆ. ಈ ದಾಳಿಯು ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದ್ದೇ ಎಂಬುದು ಇಡಿ ಇನ್ನೂ ದೃಢಪಡಿಸಿಲ್ಲ.
ಚಿನ್ನ ಕಳ್ಳಸಾಗಣೆ ಹಗರಣ: ಕೇರಳ ಮುಖ್ಯಮಂತ್ರಿಗಳ ಮಾಜಿ ಪ್ರಧಾನ ಕಾರ್ಯದರ್ಶಿ ಬಂಧನ
ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದ ಕಂಗನಾ ರಣಾವತ್ ಅವರ ವಿರುದ್ಧ ದೇಶದ್ರೋಹದ ಮೊಕದ್ದಮೆ ಹೂಡಬೇಕೆಂದು ಒತ್ತಾಯಿಸಿದ್ದ ಥಾಣೆಯ ಓವಾಲಾ-ಮಜಿವಾಡಾ ಕ್ಷೇತ್ರದ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಈ ಹಿಂದೆ ಸುದ್ದಿಯಲ್ಲಿದ್ದರು.