ನವದೆಹಲಿ: ಇಂದು ಕೇಂದ್ರ ಚುನಾವಣಾ ಆಯೋಗ ದೆಹಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಮಾಡುವ ಸಾಧ್ಯತೆಯಿದೆ.
ಇಂದು ಮಧ್ಯಾಹ್ನ 3:30ಕ್ಕೆ ಈ ಬಗ್ಗೆ ಆಯೋಗ ಅಧಿಕೃತವಾಗಿ ದಿನಾಂಕ ನಿಗದಿ ಮಾಡಿ ಘೋಷಣೆ ಹೊರಡಿಸುವ ಸಾಧ್ಯತೆ ಇದೆ. ಮುಖ್ಯ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಅಧಿಕೃತ ಘೋಷಣೆ ಮಾಡಲಿದ್ದಾರೆ.
70 ಸದಸ್ಯ ಬಲದ ವಿಧಾನಸಭೆಯ ಅವಧಿ ಇದೇ ಫೆಬ್ರವರಿ 2020ಕ್ಕೆ ಕೊನೆಗೊಳ್ಳಲಿದೆ. ಹೀಗಾಗಿ ಆಯೋಗ ಇದೇ ತಿಂಗಳು ಚುನಾವಣೆ ಪ್ರಕ್ರಿಯೆ ಆರಂಭಿಸಬೇಕಿದೆ.