ಶ್ರೀನಗರ( ಜಮ್ಮು -ಕಾಶ್ಮೀರ): ಇಲ್ಲಿನ ಕುಲ್ಗಾಂನ ನಾಗ್ನಾಡ್ - ಚಿಮ್ಮರ್ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತನಾಗಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರು ಮತ್ತು ಭದ್ರತಾ ಪಡೆಗಳು ಉಗ್ರರ ಜಾಡು ಹಿಡಿದು ಕಾರ್ಯಾಚರಣೆ ನಡೆಸುತ್ತಿದೆ. ಉಗ್ರರ ಹುಟುಕಾಟ ನಡೆಸುತ್ತಿರುವ ಸೇನೆ, ಸ್ಥಳದಲ್ಲಿ ಬಿಡುಬಿಟ್ಟಿದೆ. ಈ ವೇಳೆ ನಡೆದ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ. ಮೂವರು ಯೋಧರು ಎನ್ಕೌಂಟರ್ ವೇಳೆ ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮೊದಲು ಜುಲೈ 13 ರಂದು ಅನಂತ್‌ನಾಗ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದರು. ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಉಗ್ರರ ಬೇಟೆಯಾಡಿದ್ದವು. ಇನ್ನು ಜುಲೈ 12 ರಂದು ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ಗುಲ್ಶನ್ ಅಬಾದ್ ರೆಬನ್ ಗ್ರಾಮದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತರಾಗಿದ್ದರು.